NEWSನಮ್ಮರಾಜ್ಯಬೆಂಗಳೂರು

IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಮತದಾರರ ಮೊಬೈಲ್‌ಗಳಿಗೆ ಐವಿಆರ್‌ಎಸ್ ಹಾಗೂ ಬಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಹಿಸಲಾಗುವುದೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಲೋಕಸಭಾ ಚುನಾವಣೆ ಸಂಬಂಧ ಮತದಾನದ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈಗಾಗಲೇ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆಯಾ ವಲಯಗಳಲ್ಲಿ ತಳ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ.

ಇದೀಗ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಸುವವರ ಮಾಹಿತಿಯು ಪಾಲಿಕೆಯ ಕಂದಾಯ ವಿಭಾಗದಲ್ಲಿ ಲಭ್ಯವಿದ್ದು, ಅದರನುಸಾರ ಎಲ್ಲರಿಗೂ ಐವಿಆರ್‌ಎಸ್ ಹಾಗೂ ಬೆಲ್ಕ್ ಎಸ್.ಎಂ.ಎಸ್ ಮೂಲಕ ಏಪ್ರಿಲ್ 26 ರಂದು ತಪ್ಪದೆ ಮತ ಚಲಾಯಿಸಲು ಸಂದೇಶ ಕಳುಗಿಸಲಾಗವುದೆಂದು ಹೇಳಿದರು.

ಸಕ್ಷಮ್ ತಂತ್ರಾಶದಲ್ಲಿ ನೋಂದಾಯಿಸಿಕೊಳ್ಳಿ: ನಗರ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿರುವ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರು ಸಕ್ಷಮ್ ತಂತ್ರಾಂಶದ ಮೂಲಕ ಸಾರಿಗೆ ವ್ಯವಸ್ಥೆ ಅವಶ್ಯಕತೆ ಇರುವವರು ಮುಂಚಿತವಾಗಿಯೇ ಕಾಯ್ದಿರಿಸಿಕೊಳ್ಳುವ ಸಲುವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಅದರಂತೆ, ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರು ಸಕ್ಷಮ್ ತಂತ್ರಾಂಶದಲ್ಲಿ ಏಪ್ರಿಲ್ 24ನೇ ಸಂಜೆ 5 ಗಂಟೆಯವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಸಂಭಂಧಪಟ್ಟ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಗಳು ಅದಕ್ಕೆ ಸೂಕ್ತ ಕ್ರಮ ವಹಿಸಲಿದ್ದಾರೆ ಎಂದು ಹೇಳಿದರು.

ಸಕ್ಷಮ್ ತಂತ್ರಾಂಶದಲ್ಲಿ ದಿವ್ಯಾಂಗರಿಗೆ(PwDs) ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅಮೂಲ್ಯವಾದ ಸಾಧನವಾಗಿದ್ದು, ದಿವ್ಯಾಂಗರಿಗೆ ನೋಂದಾಯಿಸಲು, ಅವರ ಮತಗಟ್ಟೆಯನ್ನು ಹುಡುಕಲು ಮತ್ತು ಮತ ಚಲಾಯಿಸಲು ಸುಲಭವಾಗುವಂತೆ ಮಾಡಲಿದೆ ಎಂದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ