Vijayapatha – ವಿಜಯಪಥ
Friday, November 1, 2024
CrimeNEWSಕೃಷಿ

ಮೈಸೂರು: ಚಂದ್ರವಾಡಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಬೆಳೆ ನಾಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಂಜಗೂಡು ತಾಲೂಕಿನ ಹುಲಹಳ್ಳಿ ಹೋಬಳಿಯ ಚಂದ್ರವಾಡಿ ಗ್ರಾಮದಲ್ಲಿ 5 ರಿಂದ 6 ಗಂಡಾನೆಗಳು ಹಿಂಡು ಎರಡು ದಿನಗಳಿಂದ ರೈತರ ಜಮೀನುಗಳಿಗೆ ದಾಳಿ ಮಾಡಿ ಫಸಲನ್ನು ನಾಶ ಮಾಡಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಚಿಕ್ಕದೇವಮ್ಮನ ಬೆಟ್ಟದ ಅರಣ್ಯ ಪ್ರದೇಶದಿಂದ ಆಹಾರ ಅರಸಿ ಬಂದ ಕಾಡಾನೆಗಳ ಹಿಂಡು ಚಂದ್ರವಾಡಿ ಗ್ರಾಮದ ತಿಮ್ಮನಾಯಕ ತೋಪನಾಯ್ಕ ಎಂಬುವರಿಗೆ ಸೇರಿದ ಸುಮಾರು 6 ಎಕರೆಯಲ್ಲಿ ಬೆಳೆದಿದ್ದ ರಾಗಿ ಮುಸುಕಿನ ಜೋಳ, ಬಾಳೆ ಮುಂತಾದ ಬೆಳೆಗಳನ್ನು ತಿಂದು ತುಳಿದು ಹಾಳು ಮಾಡಿವೆ.

ಸಿದ್ದನಾಯ್ಕ ಎಂಬವರಿಗೆ ಸೇರಿದ ಪಂಪ್ ಸೆಟ್‌ನ ಬೋರ್ ವೆಲ್‌ಗಳನ್ನು ಕಿತ್ತು ಹಾಳು ಮಾಡಿವೆ. ಅಷ್ಟೇ ಅಲ್ಲದೆ ಚಂದ್ರವಾಡಿ, ಲಂಕೆ, ಅಲ್ಲಯ್ಯನಪುರ ಗ್ರಾಮಗಳ ಸುತ್ತಮುತ್ತ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ರೈತರು ತಾವು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳಿಂದ ಉಳಿಸಿಕೊಳ್ಳಲು ಹರಸಾಹಸ ಪಡಬೇಕಾಗಿದೆ. ಸಾಲ ಸೋಲ ಮಾಡಿ ರೈತರು ಬೆಳೆದ ಫಸಲುಗಳನ್ನು ಕಾಡಾನೆಗಳು ತಿಂದು ತುಳಿದು ನಾಶ ಮಾಡುತ್ತಿವೆ.

ಒಂದು ಕಡೆ ಸರಿಯಾದ ಬೆಲೆ ಸಿಗದೇ ರೈತರು ಸಂಕಷ್ಟಕ್ಕೀಡಾಗಿದ್ದು ಮತ್ತೊಂದು ಕಡೆ ಕಾಡಾನೆಗಳ ದಾಳಿಯಿಂದ ಕಂಗಲಾಗಿದ್ದಾರೆ. ಹಲವು ದಿನಗಳಿಂದಲೂ ಕಾಡಾನೆ ಹಾವಳಿಯಿದ್ದು ಅರಣ್ಯ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ರೈತರು ಆರೋಪಿಸುತ್ತಿದ್ದಾರೆ.

ಇನ್ನು ಈ ಭಾಗದಲ್ಲಿ ಕಾಡಾನೆಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು ಸಾಕಷ್ಟು ಬೆಳೆ ಹಾನಿಗೊಳಗಾಗಿವೆ. ಮಕ್ಕಳು ಶಾಲೆಗೆ ಹೋಗಲು ಹೆದರುತ್ತಿದ್ದು, ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಮುಂದೆಯಾದರೂ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳು ಇತ್ತ ಗಮನಹರಿಸಿ. ಆನೆಗಳ ಹಿಂಡನ್ನು ಕಾಡಿಗೆ ಓಡಿಸಬೇಕು. ರೈತರ ಬೆಳೆಗಳನ್ನು ರಕ್ಷಿಸಬೇಕೆಂದು ರೈತರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...