ಕನಿಷ್ಠ ವಿದ್ಯಾರ್ಹತೆ SSLC ಪಾಸ್: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲ ವಿವಿಧ ಸಹಕಾರ ಸಂಘ/ ಬ್ಯಾಂಕ್ಗಳ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.

ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್, ಸಹಕಾರ ತರಬೇತಿ ಸಂಸ್ಥೆಯು ಜುಲೈ 1 ರಿಂದ 6 ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ಪ್ರಾರಂಭಿಸಿದೆ.
ಹೀಗಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲ ವಿವಿಧ ಸಹಕಾರ ಸಂಘ/ ಬ್ಯಾಂಕ್ಗಳ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.
ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವಿದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು.
ಅರ್ಜಿಯನ್ನು ಇದೇ ಜೂ. 30ರ ಒಳಗಾಗಿ ಸಲ್ಲಿಸಬೇಕು. ತರಬೇತಿ ಪಡೆಯುವ ಎಲ್ಲ ಅಭ್ಯರ್ಥಿಗಳಿಗೆ ಮಾಸಿಕ 500 ರೂ. ಶಿಷ್ಯ ವೇತನ ನೀಡಲಾಗುವುದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ 600 ರೂ. ಶಿಷ್ಯ ವೇತನ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ದೂ.080-35541407 ಅಥವಾ ಮೊ.90362 59781 ಸಂಪರ್ಕಿಸಬಹುದು ಅಥವಾ ಸಂಸ್ಥೆಯ ಕಚೇರಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್, ಸಹಕಾರ ಭವನ, #1/3, 2 ನೇ ಮಹಡಿ, 3ನೇ ಮುಖ್ಯ ರಸ್ತೆ, ಕನ್ನಡ ಸಾಹಿತ್ಯ ಪರಿಷತ್ ಹಿಂಭಾಗ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಪ್ರಾಚಾರ್ಯರಾದ ಶೈಲಾ ಬಿ.ವಿ. ತಿಳಿಸಿದ್ದಾರೆ.
Related









