- ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ l ಜಿಲ್ಲೆಯ101 ಪಂಚಾಯಿತಿಗಳಲ್ಲಿ ಮಾದರಿ ಶಾಲೆ l ಗುಣಮಟ್ಟದ ಶಿಕ್ಷಣಕ್ಕೆ ಮೊದಲ ಆದ್ಯತೆ
ಬೆಂಗಳೂರು ಗ್ರಾಮಾಂತರ: ಮುಂಬರುವ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಹೆಚ್ಚು ಕಾರ್ಯಪ್ರವೃತ್ತರಾಗಿ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ರಾಜ್ಯದಲ್ಲಿ ಪ್ರತಿ ವರ್ಷ ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಪ್ರಥಮ ಸ್ಥಾನದಲ್ಲಿರುತ್ತವೆ. ಶಿಕ್ಷಣದಲ್ಲಿ ಮುಂದುವರೆದ ಜಿಲ್ಲೆಗಳಾಗಿವೆ. ಆ ಸಾಲಿಗೆ ನಮ್ಮ ಜಿಲ್ಲೆಯು ಸೇರಬೇಕು. ನಮ್ಮ ಜಿಲ್ಲೆಯು ಕೂಡ ಶಿಕ್ಷಣದಲ್ಲಿ ಮುಂದುವರಿಯಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು. ಶಿಕ್ಷಣಕ್ಕೆ ಸರ್ಕಾರದಿಂದ ಬೇಕಾದ ಎಲ್ಲ ರೀತಿಯ ನೆರವು ನೀಡಲು ನಾವು ಸದಾ ಸಿದ್ದರಿದ್ದೇವೆ. ಜಿಲ್ಲೆಯನ್ನು ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಕೆಲಸ ಶಿಕ್ಷಕರಾದ ನಿಮ್ಮೆಲ್ಲರ ಮೇಲಿದೆ ಎಂದು ಹೇಳಿದರು.
ಅಂದಿನ ಕಾಲದಲ್ಲಿ ಶಿಸ್ತಿನ ಪಾಠ ಈಗಿನ ಕಾಲಕ್ಕೆ ಮಾದರಿ, ಎಲ್ಲರೂ ಒಂದಲ್ಲ ಒಂದು ದಿನ ನಿವೃತ್ತಿ ಹೊಂದುವವರೇ ಆದರೆ ಅವರು ನೀಡಿರುವ ಕೊಡುಗೆಗಳು, ಗುರುತುಗಳು ಅಜರಾಮರವಾಗಿರಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡಿ ಹಲವಾರು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ಅಗ್ರಗಣ್ಯ ದೇಶಗಳ ಜೊತೆಗೆ ನಮ್ಮ ದೇಶ ಬೆಳೆಯಬೇಕು. ಸಿಇಟಿ, ನೀಟ್ ನಂತಹ ಪರಿಕ್ಷೆಗಳಲ್ಲಿ ನಮ್ಮ ಸರ್ಕಾರಿ ಶಾಲೆ ಮಕ್ಕಳು ಬೆಳೆಯಬೇಕು. ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಿ ದೇಶದ ಅಭಿವೃದ್ಧಿಗೆ ಅವರನ್ನು ಬೆಳೆಯುವಂತೆ ಮಾಡುವುದು ಶಿಕ್ಷಕರ ಕೈಯಲ್ಲಿದೆ ಎಂದರು.
ರಾಜ್ಯಾದ್ಯಂತ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಜಿಲ್ಲೆಯಲ್ಲಿ 4 ರಿಂದ 5 ಪಬ್ಲಿಕ್ ಶಾಲೆ, ಜೊತೆಗೆ 101 ಗ್ರಾಮ ಪಂಚಾಯಿತಿಗಳ ಕೇಂದ್ರ ಸ್ಥಾನದಲ್ಲಿ ಸಿಎಸ್ಆರ್ ಅನುದಾನದಡಿ ಸರ್ಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಈಗಾಗಲೇ ಸಿದ್ಧತೆ ಆರಂಭವಾಗಿದೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಆಧುನಿಕ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಂತೆ ಕಾನ್ವೆಂಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡಿ ರಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಿ ಭಾರತ ಅತ್ಯಂತ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹೊಂದಿರುವ ದೇಶ. ಅಂದಿನ ಕಾಲದಲ್ಲಿ ಅಕ್ಷರ ಸಂಸ್ಕೃತಿ ಎಲ್ಲರಿಗೂ ಸಿಗುತ್ತಿರಲಿಲ್ಲ, ಅಂತಹ ಸಮಯದಲ್ಲಿದ್ದ ಅನೇಕ ಸಂಪ್ರದಾಯಗಳು ಹಾಗೂ ಮೂಡನಂಬಿಕೆಗಳನ್ನು ಹೋಗಲಾಡಿಸಲು ಸಮಾಜದಲ್ಲಿನ ಮಹಾನ್ ವ್ಯಕ್ತಿಗಳಾದ ಬುದ್ಧ, ಬಸವಣ್ಣ, ಜ್ಯೋತಿಭಾ ಫುಲೆ, ಸಾವಿತ್ರಿಬಾಯಿ ಫುಲೆ, ಡಾ.ಬಿ.ಆರ್ ಅಂಬೇಡ್ಕರ್ ಅವರು ಈ ರೀತಿಯ ಅನಿಷ್ಟ ಪದ್ಧತಿಗಳನ್ನು ದಿಕ್ಕರಿಸಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದರು.

ನಮ್ಮ ದೇಶವು ಮುನ್ನೆಲೆಗೆ ಬರಬೇಕೆಂದರೆ ಮೊದಲು ಶಿಕ್ಷಣ ಕ್ಷೇತ್ರದಲ್ಲಿ ಅಚ್ಚುಕಟ್ಟಾದ ಕೆಲಸ ಮಾಡಬೇಕು. ಆದ್ದರಿಂದ ಕಡ್ಡಾಯ ಶಿಕ್ಷಣ ನೀಡಬೇಕು ಎಂಬುದನ್ನು ಶಾಸನ ಬದ್ದವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ 45 ನೇ ವಿಧಿಯಲ್ಲಿ ಪರಿಚಯಿಸಿದರು. ಈ ರೀತಿಯ ಕಾನೂನುಗಳನ್ನು ಜಾರಿಗೆ ತಂದು ಮಹಿಳೆಯರಿಗೆ, ದಲಿತರಿಗೆ, ಕಾರ್ಮಿಕರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಶಿಕ್ಷಣ ಸಿಕ್ಕಂತಾಯಿತು.
ಹಾಗೇ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಾಧನೆ ಮಾಡಿದವರು, ಆದ್ದರಿಂದ ಸತತ ಎರಡು ಬಾರಿ ರಾಷ್ಟ್ರಪತಿಯಾಗಿ ಆಯ್ಕೆಯಾಗುತ್ತಾರೆ. ಆದ್ದರಿಂದ ಶಿಕ್ಷಕರು ಇವರ ಆದರ್ಶಗಳನ್ನು ಪಾಲನೆ ಮಾಡಬೇಕು. ಶಿಕ್ಷಕರ ದಿನಾಚರಣೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆಶಯಗಳಿಗೆ ನಿಜವಾದ ಅರ್ಥ ಸಿಗಬೇಕೆಂದರೆ ಸರ್ಕಾರಿ ಶಾಲೆಗಳ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿರುವ ಪೋಷಕರಿಗೆ ನಾವೆಲ್ಲರೂ ಸೇರಿ ಸರ್ಕಾರಿ ಶಾಲೆಗಳ ಮೇಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕು.
ಕಳೆದ ಮೂರು ನಾಲ್ಕು ವರ್ಷಗಳಿಂದ ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಕುಸಿಯುತ್ತಿದೆ. ಎಷ್ಟೋ ಸರ್ಕಾರಿ ಶಾಲೆಯಲ್ಲಿ ಬೆರಳೆಣಿಕೆಯಷ್ಟು ಮಕ್ಕಳಿದ್ದರೆ, ಇನ್ನೂ ಕೆಲವು ಶಾಲೆಗಳಲ್ಲಿ ಒಂದನೇ ತರಗತಿಗೆ ಒಂದು ಮಗು ಕೂಡ ಇಲ್ಲದಂತಾಗಿದೆ. ನಾವು ಮುಖ್ಯವಾಗಿ ಮಕ್ಕಳ ಕಲಿಯುವ ಕ್ರಮವನ್ನು ಅಧ್ಯಯನ ಮಾಡಿ ಬದಲಾಯಿಸಬೇಕು. ಈ ಕಾರ್ಯವನ್ನು ಕೇವಲ ಶಿಕ್ಷಕರು ಮಾತ್ರ ಮಾಡಬೇಕು. ನೀವು ಶಾಲೆಗೆ ಬರುವ ಮಕ್ಕಳನ್ನು ನಿಮ್ಮ ಮಕ್ಕಳು ಎಂಬ ಭಾವನೆಯಿಂದ ಶಿಕ್ಷಣವನ್ನು ಧಾರೆಯರಿಯಬೇಕು ಅದು ಒಂದಲ್ಲ ಒಂದು ದಿನ ಉತ್ತಮ ಫಲ ನೀಡುತ್ತದೆ, ಅಂದು ಮಕ್ಕಳು ನಿಮ್ಮನ್ನು ಪೂಜಿಸುತ್ತಾರೆ ಎಂದು ತಿಳಿಸಿದರು.
ಜಿಲ್ಲೆಯ 15 ಶಿಕ್ಷಕರಿಗೆ ಅತ್ಯುತ್ತಮ ಪ್ರಶಸ್ತಿ, ಒಬ್ಬರಿಗೆ ರಾಜ್ಯ ಪ್ರಶಸ್ತಿ, ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುನಾಥ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜಿನಪ್ಪ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇ.ಒ ಶ್ರೀನಾಥ್ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಲಲಿತಮ್ಮ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಿಕ್ಷಕರ ವೃಂದ, ಸಾರ್ವಜನಿಕರು ಭಾಗವಹಿಸಿದ್ದರು.
Related


You Might Also Like
ಜಕ್ಕೂರು ರೈಲ್ವೆ ಮೇಲ್ಸೇತುವೆ 3 ತಿಂಗಳಲ್ಲಿ ಪೂರ್ಣಗೊಳಿಸಿ: ಗುತ್ತಿಗೆದಾರರಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಾಕೀತು
3.5 ಟನ್ ಪ್ಲಾಸ್ಟಿಕ್ ವಶಪಡಿಸಿಕೊಂಡು 1.5 ಲಕ್ಷ ರೂ. ವಿಧಿಸಲಾಗಿದೆ. ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು 3 ತಿಂಗಳಲ್ಲಿ ಪೂರ್ಣಗೊಳಿಸಲು...
ಯುವಜನತೆ ಬದುಕಿನ ಶಿಸ್ತಿಗೆ ಕ್ರೀಡೆ ಮುಖ್ಯ: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಸಚಿವ ಮುನಿಯಪ್ಪ ಅಭಿಮತ
ಬೆಂ.ಗ್ರಾಂ.: ಯುವ ಜನತೆ ಬದುಕಿನಲ್ಲಿ ಶಿಸ್ತು ಅಳವಡಿಸಿಕೊಳ್ಳಲು ಶಿಕ್ಷಣದ ಜತೆಗೆ ಕ್ರೀಡೆಯು ಮುಖ್ಯ. ಕ್ರೀಡೆ ಎಂಬುದು ಕೇವಲ ಮನರಂಜನೆಗೆ ಮಾತ್ರ ಸೀಮಿತವಾಗಿರದೆ ಮನುಷ್ಯನ ಮಾನಸಿಕ ಹಾಗೂ ಸಾಂಸ್ಕೃತಿಕ...
ಕನಿಷ್ಠ ಪಿಂಚಣಿ 7500 ರೂ. ಪಡೆಯಲು EPS ಪಿಂಚಣಿದಾರರ ನಿರಂತರ ಹೋರಾಟ- 92ನೇ ಮಾಸಿಕ ಸಭೆಯಲ್ಲಿ ಹಲವು ನಿರ್ಧಾರಗಳು
ಬೆಂಗಳೂರು: ಇಪಿಎಸ್ ಪಿಂಚಣಿದಾರರ 92ನೇ ಮಾಸಿಕ ಸಭೆ ಲಾಲ್ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ....
BMTC ಸಂಸ್ಥೆಯಿಂದ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕೊಡಿ: ವ್ಯವಸ್ಥಾಪಕ ನಿರ್ದೇಶಕರಿಗೆ ಟಿಸಿ ಶ್ರೀನಿವಾಸ್ ಮನವಿ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವ, ಕನ್ನಡ ರಾಜ್ಯೋತ್ಸವದಂದು ಕೊಡಲಾಗುತ್ತಿತ್ತು ಆದರೆ, ಇತ್ತೀಚೆಗೆ ನಿಲ್ಲಿಸಿರುವುದು ಸರಿಯಾದ ಕ್ರಮವಲ್ಲ...
KKRTC ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 3 ವರ್ಷ ಜೈಲು, 6 ಸಾವಿರ ರೂ. ದಂಡ ವಿಧಿಸಿದ ಕೋರ್ಟ್ ಮಹತ್ವದ ತೀರ್ಪು
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ...
ಮೆಜೆಸ್ಟಿಕ್ ಬಳಿ ಮೊಬೈಲ್ ಶೌಚಾಲಯ ವ್ಯವಸ್ಥೆ: ಆಯುಕ್ತ ರಾಜೇಂದ್ರ ಚೋಳನ್
ಬೆಂಗಳೂರು: ಮೆಜೆಸ್ಟಿಕ್ ಬಳಿ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುವುದನ್ನು ನಿಯಂತ್ರಿಸುವ ಸಲುವಾಗಿ ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ...
ಸರ್ಕಾರಿ ಬಸ್ ಚಾಲಕ-ನಿರ್ವಾಹಕರು ಎಲ್ಲದಕ್ಕೂ ಹೊಣೆಯಲ್ಲ: ಸುಜಯ ಆರ್.ಕಣ್ಣೂರ
ಬಿಎಂಟಿಸಿ ವಿರುದ್ಧ 10 ಸಾವಿರ ದೂರು' ಮುಖಪುಟ ವರದಿ ತಿಳಿಸುವ ಸಲುವಾಗಿ ಈ ಬರಹ. ನಾನು ಬಿಂಎಂಟಿಸಿ ಬಸ್ನಲ್ಲಿ 35 ವರ್ಷಗಳಿಂದ ಪ್ರಯಾಣಿಸುತ್ತಿದ್ದೇನೆ. ಇದರಲ್ಲಿ ಯಾರದು ತಪ್ಪು,...
BMTC ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಖಂಡಿಸಿ ಚಾಲಕರ ಪ್ರತಿಭಟನೆ
ಬೆಂಗಳೂರು: ಕಾರಿಗೆ ಸೈಡ್ ಬಿಡಲಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ....
ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಕಾರಾತ್ಮಕ ನಡೆ ಶ್ಲಾಘನೀಯ: ಪ್ರಧಾನಿ ಮೋದಿ
ನ್ಯೂಡೆಲ್ಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಕಾರಾತ್ಮಕ ನಡೆ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನಾನು ಮೋದಿ ಅವರೊಂದಿಗೆ...