NEWSನಮ್ಮಜಿಲ್ಲೆನಮ್ಮರಾಜ್ಯ

BMTC ಬಸ್‌ಗಳಿಗೆ ಹಸಿರು ನಿಶಾನೆ ತೋರಿದ ಸಚಿವರಾದ ಮುನಿಯಪ್ಪ, ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ
  • ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಿಂದ ಬೆಂಗಳೂರು ಮಹಾನಗರಕ್ಕೆ ತಲುಪುಲು ವಾಯುವಜ್ರ ಸಾರಿಗೆ ವಿಭಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಬೆಂಗಳೂರು ಗ್ರಾಮಾಂತರ: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಆಹಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಕೆ.ಎಸ್.ಆರ್.ಟಿ.ಸಿ ಮತ್ತು ಬಿ.ಎಂ.ಟಿ.ಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದು ಇದು ಎಲ್ಲಾ ವಿಮಾನ ನಿಲ್ದಾಣ ಗಳಿಗಿಂತ ವಿಭಿನ್ನವಾಗಿದೆ ಮತ್ತು ಅತಿ ದೊಡ್ದ ವಿಮಾನ ನಿಲ್ದಾಣ ವಾಗಿದೆ. ವಿಮಾನ ನಿಲ್ದಾಣದಿಂದ ಬೆಂಗಳೂರು ನಗರಕ್ಕೆ ಸಂಚಾರ ಮಾಡಲು BMTC ಮತ್ತು ವಾಯುವಜ್ರದ ಎಲೆಕ್ಟ್ರಿಕ್ ಬಸ್‌ಗಳ ಸೇವೆಯನ್ನು ಕಲ್ಪಿಸಿದ್ದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಸ್ ಗಳನ್ನು ನೀಡಲು ಸಚಿವರು ಒಪ್ಪಿಗೆಯನ್ನು ನೀಡಿದರು.

ದೇವನಹಳ್ಳಿ ತಾಲೂಕಿನ ತೂಬಗೆರೆ ಪಂಚಾಯತಿಗೆ ಬಸ್ ಗಳು ಅನಾನುಕೂಲ ಇರುವುದರಿಂದ ಅಲ್ಲಿಗೆ ಸಂಪರ್ಕ ಕಲ್ಪಿಸಲು ಸಾರಿಗೆ ಸಚಿವರಿಗೆ ಮನವಿಯನ್ನು ನೀಡಲಾಯಿತು.

ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್ಎಸ್ ಘಾಟಿ ಸುಬ್ರಮಣ್ಯ ದೇವಸ್ಥಾನ ಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಬರುವುದರಿಂದ ಬಸ್ ವ್ಯವಸ್ಥೆಗಳು ಹಾಗೂ ಅನ್ನ ದಾಸೋಹ ಭವನವನ್ನು ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಿಗೆ ಮನವಿಯನ್ನು ನೀಡಲಾಯಿತು.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಮುಖ್ಯ ಕಾರ್ಯನಿರ್ವಾಹಕ ಸತ್ಯಕಿರಘುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್.ಎನ್. ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ, ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ