NEWSನಮ್ಮರಾಜ್ಯರಾಜಕೀಯ

ಸಚಿವ ಕೆ.ಸಿ.ನಾರಾಯಣ ಗೌಡ – ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ವಿಧಾನಸೌಧದಲ್ಲೇ ಜಟಾಪಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತೋಟಗಾರಿಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಮತ್ತು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ವಿಧಾನಸಭೆ ಮೊಗಸಾಲೆಯಲ್ಲಿ ಸೋಮವಾರ ಮಧ್ಯಾಹ್ನ ಜಟಾಪಟಿ ನಡೆದಿದೆ.

ಈ ವೇಳೆ ವಿಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವರಾದ ಕೆ.ಎಸ್. ಈಶ್ವರಪ್ಪ, ವಿ.ಸೋಮಣ್ಣ, ಜೆಡಿಎಸ್ ಶಾಸಕ ಅನ್ನದಾನಿ ಸೇರಿ ಹಲವರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದಾರೆ.

ಅನುದಾನ ಬಿಡುಗಡೆಗೆ ಸಂಬಂಧಿಸಿ ಜಟಾಪಟಿ ನಡೆದಿದೆ. ಮಧ್ಯಾಹ್ನ 12.40ರ ಸುಮಾರಿಗೆ ಸಚಿವ ನಾರಾಯಣ ಗೌಡ ಉಪಾಹಾರ ಗೃಹದತ್ತ ಬರುತ್ತಿದ್ದರು. ಆಗ ಎದುರಾದ ಶಾಸಕ ಬೆಳ್ಳಿ ಪ್ರಕಾಶ್, ತಮ್ಮ ಕ್ಷೇತ್ರಕ್ಕೆ ತೋಟಗಾರಿಕೆ ಇಲಾಖೆಯಿಂದ ಅನುದಾನ ಬಿಡುಗಡೆ ವಿಳಂಬ ಆಗುತ್ತಿರುವ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.

ಕ್ಷೇತ್ರದ ಕೆಲಸ ಮಾಡದ ನೀನು ಅಸಮರ್ಥ ಮಂತ್ರಿ. ನೀನೇನು ಅಂತಾ ಗೊತ್ತಿದೆ ಎಂದು ಬೆಳ್ಳಿ ಪ್ರಕಾಶ ಮಾತಿನಿಂದ ಚುಂಚಿದ್ದಾರೆ. ಇದರಿಂದ ಕೋಪಗೊಂಡ ಸಚಿವರು ಮಾತಿನ ಚಕಮಕಿ ನಡೆದು. ಸಹನೆಯ ಎಲ್ಲೆ ಮೀರಿದ್ದು ಖಾರವಾಗಿಗೆ ಶಾಸಕರಿಗೆ ಉತ್ತರಿಸಿ, ನಿನ್ನ ಸರ್ಟಿಫಿಕೇಟ್ ಯಾವನಿಗೆ ಬೇಕು ಹೋಗೋ ಎಂದು ಜಾಡಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ನಾರಾಯಣ ಗೌಡ ಅವರು, ಗಲಾಟೆ ಏನಿಲ್ಲ. ಒಂದು ಸಾಮಾನ್ಯ ವರ್ಗಾವಣೆ ಪ್ರಕರಣ. ಅದರ ಬಗ್ಗೆ ಮಾತನಾಡೋಣ ಬನ್ನಿ ಎಂದಿದ್ದೆ. ಅವರು ಸ್ವಲ್ಪ ಏಕವಚನದಲ್ಲಿ ಮಾತಾಡಿದರು. ಅದಕ್ಕೆ ನನಗೆ ಸ್ವಲ್ಪ ಬೇಜಾರಾಯಿತು. ಅವರು ಇನ್ಮುಂದೆ ಹೀಗೆಲ್ಲಾ ಮಾತಾಡಬಾರದು ಅಷ್ಟೇ‌. ಅವರು ಮಾತಾಡೋದು ರಫ್. ಆ ರೀತಿ ಮಾತಾಡಬಾರದು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ