CRIMENEWSನಮ್ಮರಾಜ್ಯ

ಜೀವ ಬೆದರಿಕೆ ಕರೆ ಆಡಿಯೋ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ ಖರ್ಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬೆದರಿಕೆ ಮತ್ತು ನಿಂದನೆಯ ಕರೆಗಳು ಬರುತ್ತಿದ್ದಾವೆ ಎಂದು ಹೇಳುತ್ತಿದ್ದ ಸಚಿವ ಪ್ರಿಯಾಂಕ ಖರ್ಗೆ ಇಂದು ಆಡಿಯೋ ಸಹಿತ ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ X ಮಾಡಿರುವ ಅವರು, RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ ಎಂದು ಪ್ರಶ್ನಿಸಿದ್ದಾರೆ.

ಇನ್ನು ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು @BYVijayendra @RAshokaBJP @CTRavi_BJP @karkalasunil @mepratap @NswamyChalavadi
ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ ಎಂದು ಕೇಳಿದ್ದಾರೆ.

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ.

RSSನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ.

ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ