ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೇ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ವಜಾಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೀಲ್ಸ್ ಮಾಡಿದವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ. ಅಂಥ ನೌಕರರ ಬಗ್ಗೆ ಯಾವುದೇ ದಾಕ್ಷಿಣ್ಯ ತೋರದೆ ಕೆಲಸದಿಂದ ತೆಗೆದುಹಾಕಲಾಗುವುದು ಎಂದು ಹೇಳಿದರು.
ಇತ್ತೀಚೆಗೆ ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಚಾಲಕ ರೀಲ್ಸ್ ಮಾಡಲು ಆರಂಭಿಸಿದ್ದನು. ಇದೇ ಸಮಯದಲ್ಲಿ ಮುಂದೆ ಹೋಗುತ್ತಿದ್ದ ಎತ್ತಿನ ಗಾಡಿ ಗಮನಿಸಿದೆ ಹಿಂಬದಿಯಿಂದ ಗಾಡಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬಸ್ ಡಿಕ್ಕಿಯಾದ ರಭಸಕ್ಕೆ ಎರಡು ಎತ್ತುಗಳು ಸ್ಥಳದಲ್ಲೆ ಮೃತಪಟ್ಟಿದ್ದವು.
ರೈತ ಮಂಜುನಾಥ್ ರಂಗಪ್ಪ ಹೆಗ್ಗಣ್ಣವರ ಅವರ ಮೆದಳು ನಿಷ್ಕ್ರೀಯಗೊಂಡಿತ್ತು. ಈ ಎಲ್ಲವನ್ನು ಗಮನಿಸಿದ್ದು, ಚಾಲಕರು ಚಾಲನೆ ವೇಳೆ ನಿರ್ಲಕ್ಷ್ಯತೊರಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.