NEWSನಮ್ಮಜಿಲ್ಲೆನಮ್ಮರಾಜ್ಯ

ಬೆಳಗಾವಿ: ಸಾರಿಗೆ ನೌಕರರ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸುವರ್ಣ ಸೌಧದ ಮುಂದೆ ಕಳೆದ 8 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾರಿಗೆ ನೌಕರರ ಕೆಲ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸಾರಿಗೆ ಸಚಿವ ಬಿ.ಶ್ರೀರಾಮುಲು ಇಂದು ನೀಡಿದ್ದಾರೆ.

ಉಪವಾಸ ಸತ್ಯಾಗ್ರಹದ ನೇತೃತ್ವ ವಹಿಸಿರುವ ಚಂದ್ರಶೇಖರ್‌ ಅವರನ್ನು ಇಂದು ಸಂಜೆ ಸುವರ್ಣಸೌಧಕ್ಕೆ ಕರೆಸಿಕೊಂಡ ಸಾರಿಗೆ ಸಚಿವರು, ಯಾವುದೇ ಷರತ್ತುಗಳಿಲ್ಲದೆ ವಜಾಗೊಳಿಸಿರುವ ನೌಕರರನ್ನು ತೆಗೆದುಕೊಳ್ಳುವ ಸಂಬಂಧ ನಮಗೆ ಎರಡು ದಿನ ಕಾಲಾವಕಾಶ ಕೊಡಿ ಒಂದು ಸುತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಮತ್ತೊಂದು ಪ್ರಮುಖವಾಗಿ ವೇತನ ಸಂಬಂಧದ ಚರ್ಚೆ ವೇಳೆ ನಮಗೆ ವೇತನ ಆಯೋಗ ಅಳವಡಿಸಿ ವೇತನ ನೀಡಬೇಕು ಎಂದು ನಾವು ಕೇಳುತ್ತಿಲ್ಲ ನಮಗೆ ವೇತನ ಮಾದರಿಯಲ್ಲಿ ಅಂದರೆ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಾದರೆ ನಮ್ಮ ಸಾರಿಗೆ ನೌಕರರಿಗೂ ಅದೇ ಸಮಾನದಲ್ಲಿ ತುಟ್ಟಿಭತ್ಯೆ ಹೆಚ್ಚಳವಾಗುತ್ತಿದೆ. ಅದೇ ಮಾದರಿಯಲ್ಲಿ ವೇತನವನ್ನು ವೇತನ ಆಯೋಗ ಮಾದರಿಯಲ್ಲಿ ಕೊಡಬೇಕು. ಇದರಿಂದ ನಾವು ನಾಲ್ಕು ವರ್ಷಕ್ಕೊಮ್ಮೆ ವೇತನಕ್ಕಾಗಿ ಪ್ರತಿಭಟನೆ ಮಾಡುವುದು ತಪ್ಪುತ್ತದೆ.

ಅಲ್ಲದೆ ನೌಕರರು ವಜಾ, ಪೊಲೀಸ್‌ ಪ್ರಕರಣ, ಅಮಾನತು ಹೀಗೆ ನಾನಾ ತೊಂದರೆಗಳನ್ನು ಅನುಭವಿಸುವುದು ತಪ್ಪುತ್ತದೆ. ಹೀಗಾಗಿ ತಾವು ನಮಗೆ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟರು. ಈ ಬಗ್ಗೆ ಮುಖ್ಯಮಂತ್ರಿಗಳು ಬಂದಕೂಡಲೇ ಚರ್ಚಿಸಿ ಒಂದು ಅಂತಿಮ ತೀರ್ಮಾನ ತೆಗೆದುಕೊಳ್ಳೋಣ ನೀವು ಇಲ್ಲೇ ಇರಿ ಎಂದು ನೌಕರರಿಗೆ ಸಾರಿಗೆ ಸಚಿವರು ತಿಳಿಸಿದ್ದಾರೆ.

ಹೀಗಾಗಿ ಇಂದು ಏನು ಚರ್ಚೆ ನಡೆದಿದೆಯೋ ಆ ಬಗ್ಗೆ ಒಂದು ಸ್ಪಷ್ಟತೆ ನಾಳೆ ಸಿಗಲಿದ್ದು ಅಲ್ಲಿಯವರೆಗೂ ನಾವು ಶಾಂತಿಯುತವಾಗಿಯೇ ಸತ್ಯಾಗ್ರಹವನ್ನು ಮುಂದುವರಿಸೋಣ ಎಂದು ನೌಕರರು ಚರ್ಚೆಯಲ್ಲಿ ತೊಡಗಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ