NEWSನಮ್ಮರಾಜ್ಯರಾಜಕೀಯ

ಖರ್ಗೆ ನಿವಾಸಕ್ಕೆ ಕೈ ಸಚಿವರ ಪರೇಡ್: 2028ರವರೆಗೆ ಕಾಂಗ್ರೆಸ್ ಸಿಎಂ ಇರ್ತಾರೆ – ಎಚ್‌ಸಿಎಂ ಮಾರ್ಮಿಕ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಕುರ್ಚಿ ಗುದ್ದಾಟದ ನಡುವೆ ಖರ್ಗೆ ನಿವಾಸಕ್ಕೆ ಸಚಿವರು ಪರೇಡ್ ನಡೆಸಿದ್ದಾರೆ. 2028ರವರೆಗೆ ಕಾಂಗ್ರೆಸ್ ಸಿಎಂ ಇರ್ತಾರೆ ಎಂದು ಎಚ್‌ಸಿ ಮಹದೇವಪ್ಪ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

ಶನಿವಾರ (ನ.22) ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿದ್ದರು. ಆ ಬೆನ್ನಲ್ಲೇ ಇಂದು (ನ.23) ಖರ್ಗೆ ನಿವಾಸಕ್ಕೆ ಸಚಿವರಾದ ಎಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿಯಾಗಿ, ಚರ್ಚಿಸಿದ್ದಾರೆ.

ಇನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮಹದೇವಪ್ಪ, ಈಗ ಸಿಎಂ ಕುರ್ಚಿ ಖಾಲಿ ಇಲ್ಲ. 2028ರವರೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸಿಎಂ ಇರ್ತಾರೆ. 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ರೇಸ್ ಶುರುವಾದಾಗ ಪ್ಲೇಯರ್ ಆಯ್ಕೆ ಮಾಡ್ತಾರೆ. ಆ ರೀತಿಯ ಸನ್ನಿವೇಶ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಅಧ್ಯಕ್ಷರು ನೀವೆಲ್ಲ ಆಕ್ಟೀವ್ ಆಗಿ, ಪಕ್ಷ ಕಟ್ಟಿ ಎಂದಿದ್ದಾರೆ ಎಂದು ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರ್ತಾರಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಸಿಎಂ ಆಕಾಂಕ್ಷಿ ಎಂದು ಪರಮೇಶ್ವರ್ ಹೇಳಿಕೆ ವಿಚಾರವಾಗಿ, ಇದು ಯಾವುದು ಕೂಡ ಚರ್ಚೆ ಆಗಿಲ್ಲ. ದಲಿತ ಸಿಎಂ ರೇಸ್ ಬಗ್ಗೆಯೂ ಚರ್ಚೆ ಆಗಿಲ್ಲ. ಡಿನ್ನರ್ ಮೀಟಿಂಗ್ ವಿಚಾರ ಮಾತನಾಡಿಲ್ಲ. ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ನೀತಿಗೆ ಜನ ಬೆಂಬಲ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ ಎಂದರು.

ಇನ್ನೂ ಕಾಂಗ್ರೆಸ್‌ನಲ್ಲೇ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿ ಆರೋಪವಾಗಿ ಮಾತನಾಡಿದ ಮಹದೇವಪ್ಪ, ಅವರು ವಿಪಕ್ಷದವರಾದ ಕಾರಣ ಆ ರೀತಿ ಮಾತನಾಡುತ್ತಾರೆ. ನಾವು ಕ್ಯಾಬಿನೆಟ್ ರಿಶಫಲ್ ಬಗ್ಗೆಯೂ ಚರ್ಚೆ ಮಾಡಿಲ್ಲ ಎಂದರು.

ಇನ್ನು ಶಾಸಕರ ಸಹಿ ಸಂಗ್ರಹದ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಸಹಿ ಹಾಕಲು ಯಾರು ಕರೆದಿಲ್ಲ ಎಂದ ಅವರು, ಆರು ತಿಂಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಅಗುತ್ತೆ ಎಂಬ ಎಚ್‌ಡಿಕೆ ಹೇಳಿಕೆಗೆ ಅವರು ಹಗಲುಗನಸು ಕಾಣ್ತಿದ್ದಾರೆ. 2028ರವರೆಗೆ ಅಧಿಕಾರ ಸಂಪೂರ್ಣ ಮಾಡಿ, ಮತ್ತೆ ನಾವೇ ಅಧಿಕಾರಕ್ಕೆ ಬರ್ತಿವಿ. ಮುಖ್ಯಮಂತ್ರಿಗಳು ಇದ್ದೆ ಇರ್ತಾರೆ ಎಂದರು.

ಈಗ ಒಬ್ಬರಿಂದ ಯಾವುದೇ ಪಕ್ಷ ಅಧಿಕಾರಕ್ಕೆ ಬರೋದಕ್ಕೆ ಸಾಧ್ಯವಿಲ್ಲ. ಕಲೆಕ್ಟೀವ್ ಲೀಡರ್‌ಶಿಪ್ ಬೇಕು, ಕಲೆಕ್ಟೀವ್ ಲೀಡರ್ ಶಿಪ್‌ನಿಂದ ಗೆದ್ದಿದ್ದೇವೆ. ದೇಶದ ಇತಿಹಾಸದಲ್ಲಿ ಯಾರು ಕೂಡ ಒಬ್ಬಂಟಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂದು ಪಕ್ಷ ಎಲ್ಲರಿಂದ ಅಧಿಕಾರಕ್ಕೆ ಬಂದಿದೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ಸಂಬಂಧ ಈ ರೀತಿ ಪ್ರತಿಕ್ರಿಯಿಸಿದರು.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ