Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆರಾಜಕೀಯ

ಶಾಸಕರೇ ಲೆಕ್ಕ ಕೊಡಿ: ಚಿಕ್ಕಪೇಟೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಪರಿಶೋಧನಾ ಯಾತ್ರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಅವರು ಅನುದಾನ ಹಾಗೂ ಅಭಿವೃದ್ಧಿಯ ಲೆಕ್ಕ ನೀಡಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು ಕ್ಷೇತ್ರದ ವಿವಿಧ ರಸ್ತೆಗಳಲ್ಲಿ ಶನಿವಾರ (ಅ.15) ಪರಿಶೋಧನಾ ಯಾತ್ರೆ ನಡೆಸಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷ ಭಾಸ್ಕರ್ ರಾವ್ ಅವರ ಸಮ್ಮುಖದಲ್ಲಿ ನಗರದ ರಾಮಕೃಷ್ಣ ಆಶ್ರಮ ವೃತ್ತದಲ್ಲಿನ ವಿವೇಕಾನಂದ ಪ್ರತಿಮೆ ಮುಂಭಾಗದಿಂದ ಯಾತ್ರೆ ಪ್ರಾರಂಭವಾಯಿತು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಎಎಪಿ ಬೆಂಗಳೂರು ಯುವ ಘಟಕದ ಅಧ್ಯಕ್ಷ ಪ್ರಕಾಶ್‌ ನಾಗರಾಜ್‌, ಪರಿಶೋಧನಾ ಯಾತ್ರೆಯ ಮಧ್ಯೆ ಅನೇಕ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು, ಪ್ರಾಥಮಿಕ ಕೇಂದ್ರಗಳಿಗೆ ಭೇಟಿ ನೀಡಲಾಗಿದೆ. ಅವುಗಳಲ್ಲಿ ಸರ್ಕಾರ ಹಾಗೂ ಶಾಸಕರ ನಿರ್ಲಕ್ಷ್ಯ ಎದ್ದು ಕಾಣಿಸುತ್ತಿದೆ ಎಂದು ಆರೋಪಿಸಿದರು.

ಇನ್ನು ಕ್ಷೇತ್ರದ ಕೊಳಗೇರಿ ಪ್ರದೇಶಗಳಲ್ಲಿ ಮೂಲಸೌಕರ್ಯಗಳಿಲ್ಲದೇ ಸಾವಿರಾರು ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಬಗೆಹರಿಸಿ, ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದರಲ್ಲಿ ಶಾಸಕ ಉದಯ್‌ ಗರುಡಾಚಾರ್‌ ಸಂಪೂರ್ಣ ವಿಫಲರಾಗಿದ್ದಾರೆ” ಎಂದು ಕಿಡಿಕಾರಿದರು.

ತಮ್ಮ ಮಾಲೀಕತ್ವದ ವಿವಿಧ ಉದ್ಯಮಗಳನ್ನು ವಿಸ್ತರಿಸುವುದರಲ್ಲೇ ನಿರತರಾಗಿರುವ ಶಾಸಕ ಉದಯ್‌ ಗರುಡಾಚಾರ್‌ ಅವರಿಗೆ ಕ್ಷೇತ್ರದ ಜನರ ಕಷ್ಟಗಳು ಕಾಣಿಸುತ್ತಿಲ್ಲ. ಅವರ ಮಾವೆರಿಕ್‌ ಹೋಲ್ಡಿಂಗ್ಸ್‌ ರಿಯಲ್‌ ಎಸ್ಟೇಟ್‌ ಕಂಪನಿಗೆ ಲಾಭ ಮಾಡಿಕೊಳ್ಳಲು ಬಿಡಿಎ ವಸತಿ ಸಂಕೀರ್ಣಗಳನ್ನು ಲಪಟಾಯಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನು ಉದಯ್‌ ಗರುಡಾಚಾರ್‌ ಅವರು ಆಸ್ತಿ ವಿವರಗಳನ್ನು ಮಾಹಿತಿ ಮುಚ್ಚಿಟ್ಟು, ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಜೈಲು ಶಿಕ್ಷೆಗೆ ಒಳಗಾಗಿ ಜಾಮೀನಿನ ಮೇಲೆ ಹೊರಗಿದ್ದಾರೆ. ಇಂತಹ ಭ್ರಷ್ಟರನ್ನು ಮತ್ತೊಮ್ಮೆ ಗೆಲ್ಲಿಸಬೇಕೇ ಎಂಬ ಬಗ್ಗೆ ಕ್ಷೇತ್ರದ ಜನತೆ ಗಂಭೀರವಾಗಿ ಯೋಚಿಸುವ ಸಮಯ ಬಂದಿದೆ ಎಂದರು.

ಪರಿಶೋಧನಾ ಯಾತ್ರೆಯು ಈಗ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಚಿಕ್ಕಪೇಟೆ ಕ್ಷೇತ್ರದಲ್ಲಿ ಅನೇಕ ಜನಾಂದೋಲನಗಳನ್ನು ಏರ್ಪಡಿಸಲು ಆಮ್‌ ಆದ್ಮಿ ಪಾರ್ಟಿ ನಿರ್ಧರಿಸಿದೆ. ಭ್ರಷ್ಟ ಶಾಸಕರ ಎಲ್ಲ ಅಕ್ರಮಗಳನ್ನು ಬಯಲಿಗೆಳೆದು ಪ್ರಾಮಾಣಿಕ ಜನಪ್ರತಿನಿಧಿಗಳು ಕ್ಷೇತ್ರದಿಂದ ಆಯ್ಕೆಯಾಗುವಂತೆ ಮಾಡುತ್ತೇವೆ ಎಂದು ಪ್ರಕಾಶ್‌ ನಾಗರಾಜ್‌ ಹೇಳಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ