NEWSನಮ್ಮರಾಜ್ಯರಾಜಕೀಯ

ಶಾಸಕ ಅಖಂಡ ಶ್ರೀನಿವಾಸ್‌ ಸಹೋದರಿ ಗಗನ ಸುಕನ್ಯಾ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ್‌ ಮೂರ್ತಿಯವರ ಸಹೋದರಿ ಹಾಗೂ ಕೋಲಾರ ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯೆ ಗಗನ ಸುಕನ್ಯಾ ಅವರು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಗಗನ ಸುಕನ್ಯಾ ಅವರಿಗೆ ಪಕ್ಷದ ಶಾಲು ಹೊದಿಸುವ ಮೂಲಕ ಸ್ವಾಗತಿ ಮಾತನಾಡಿದ ಪೃಥ್ವಿ ರೆಡ್ಡಿ, ಕೋಲಾರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೂ ಗಗನ ಸುಕನ್ಯಾ ಅವರು ಜನರ ಕಷ್ಟಗಳಿಗೆ ನಿರಂತರವಾಗಿ ನೆರವಾಗುತ್ತಾ ಬಂದಿದ್ದಾರೆ ಎಂದರು.

ಇನ್ನು ಕೋವಿಡ್‌ ಸಂದರ್ಭದಲ್ಲಿ ರೇಷನ್‌ ಕಿಟ್‌ ವಿತರಣೆಮಾಡಿ ಬಡವರಿಗೆ ನೆರವಾಗಿದ್ದಾರೆ. ಕೆಜಿಎಫ್‌ ವಿಧಾನಸಭಾ ಕ್ಷೇತ್ರದ ನೂರಾರು ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಬ್ಯಾಗ್‌ಗಳು, ನೋಟ್‌ ಪುಸ್ತಕಗಳನ್ನು ವಿತರಿಸಿದ್ದಾರೆ. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಗಡಿ ಭಾಗದ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಪರಿಚಯಿಸಿದರು.

“ಗಗನ ಸುಕನ್ಯಾ ಅವರು ಕೋಲಾರ ಜಿಲ್ಲಾ ಸಹಕಾರಿ ಒಕ್ಕೂಟದ ಚುನಾಯಿತ ನಿರ್ದೇಶಕರಾಗಿ, ಜಿಲ್ಲೆಯ ನೂರಾರು ಮಹಿಳೆಯರನ್ನು ಸಹಕಾರಿ ಕ್ಷೇತ್ರಕ್ಕೆ ಕರೆತಂದಿದ್ದಾರೆ. ಬಿಜೆಪಿ ಜತೆಗೆ ಗುರುತಿಸಿಕೊಂಡಿದ್ದ ಇವರು ಬಿಜೆಪಿಯ ರಾಜ್ಯ ಪರಿಶಿಷ್ಟ ಜಾತಿ ಘಟಕದ ಕಾರ್ಯದರ್ಶಿಯಾಗಿ ಐದು ವರ್ಷ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ.

ಕಳೆದ ಒಂಬತ್ತು ವರ್ಷಗಳಿಂದ ಕೆಇಆರ್‌ಸಿ, ಬೆಸ್ಕಾಂ, ಸಿಜಿಆರ್‌ಎಫ್‌ ಸಂಸ್ಥೆಗಳ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಅನುಭವಿ ನಾಯಕರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ ಎಂದು ಪೃಥ್ವಿ ರೆಡ್ಡಿ ಹೇಳಿದರು.

ಪಕ್ಷ ಸೇರಿ ಮಾತನಾಡಿದ ಗಗನ ಸುಕನ್ಯಾ, ಕೋಲಾರ ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ರಾಜಕಾರಣಿಗಳು ಗೆಲುವು ಸಾಧಿಸಿ ಅವರು ಮಾತ್ರ ಅಭಿವೃದ್ಧಿಯಾಗಿದ್ದಾರೆಯೇ ವಿನಃ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿಲ್ಲ. ಕೋಲಾರ ಜಿಲ್ಲೆಯ ಜನಸಾಮಾನ್ಯರಿಗೆ ಗುಣಮಟ್ಟದ ಮೂಲ ಸೌಕರ್ಯಗಳು ದೊರೆಯಬೇಕು ಹಾಗೂ ಇಲ್ಲಿನ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅಭಿವೃದ್ಧಿಯಾಗಬೇಕು.

ಇವೆಲ್ಲ ಸಾಧ್ಯವಾಗಬೇಕೆಂದರೆ ಈ ಭಾಗದಲ್ಲಿ ಆಮ್‌ ಆದ್ಮಿ ಪಾರ್ಟಿ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆ ಗೆಲುವು ಸಾಧಿಸಿ, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಈ ಸಂಕಲ್ಪದೊಂದಿಗೆ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ಕೋಲಾರದ ಮಾಜಿ ಸಂಸದ ಹಾಗೂ ಎಎಪಿ ಮುಖಂಡ ಡಾ.ವೆಂಕಟೇಶ್, ಕೋಲಾರದ ಎಎಪಿ ಜಿಲ್ಲಾಧ್ಯಕ್ಷ ಸುರೇಶ್‌ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಎಎಪಿ ಸ್ಪರ್ಧಾಕಾಂಕ್ಷಿ ದಿಲ್‌ ನವಾಜ್‌ ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ