NEWSನಮ್ಮರಾಜ್ಯರಾಜಕೀಯ

ಶಾಸಕನ  ಲಂಚ ಪ್ರಕರಣ: ಕ್ರಮ ತೆಗೆದುಕೊಳ್ಳಲಾಗದ ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಸಕರೊಬ್ಬರ ಮನೆಯಲ್ಲಿ ಕಂತೆ- ಕಂತೆ ನೋಟುಗಳು ಸಿಕ್ಕ ನಂತರವೂ ಕಾನೂನು ಕ್ರಮ ಜರುಗಿಸಲಾಗದೆ, ನಿಸ್ಸಾಹಕರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡುವ ಮೂಲಕ ರಾಜಕೀಯ ನೈತಿಕತೆಯನ್ನು ಮೆರೆಯಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯ ಚುನಾವಣೆಯ ಹೊಸ್ತಿಲಿನಲ್ಲಿರುವಾಗಲೇ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಗುತ್ತಿಗೆದಾರರೊಬ್ಬರಿಂದ ಕಂತೆ- ಕಂತೆ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ದಾಳಿಯ ಸಂದರ್ಭದಲ್ಲಿ ಸಿಕ್ಕ ನಗದು ಹಣದ ದೃಶ್ಯಕ್ಕೆ ಜನ ಸಾಮಾನ್ಯರು ಬೆಚ್ಚಿಬಿದ್ದಿದ್ದಾರೆ. ಗುತ್ತಿಗೆದಾರರ ಸಂಘ ಆರಂಭದಿಂದಲೂ ಮಾಡಿಕೊಂಡು ಬಂದ 40% ಆರೋಪಕ್ಕೆ ಪ್ರಬಲ ಸಾಕ್ಷಿಯೊಂದು ಸಿಕ್ಕಂತಾಗಿದೆ” ಎಂದರು.

ಪ್ರಕರಣ ಬಯಲಿಗೆ ಬಂದು ನಾಲ್ಕು ದಿನಗಳು ಕಳೆದರೂ ರಾಜ್ಯ ಸರಕಾರ ತಮ್ಮದೇ ಪಕ್ಷದ ಶಾಸಕನನ್ನು ಕಾನೂನು ಕ್ರಮಕ್ಕೆ ಒಳಪಡಿಸಲು ಹಿಂದೇಟು ಹಾಕುತ್ತಿದೆ ಎಂದು ದೂರಿದ ಅವರು, “ಆರೋಪಿ ಸ್ಥಾನದಲ್ಲಿ ನಿಂತು, ಇಷ್ಟೊತ್ತಿಗೆ ಜೈಲು ಪಾಲಾಗಬೇಕಿದ್ದ ಮಾಡಾಳು ವಿರೂಪಾಕ್ಷಪ್ಪಗೆ ರಾಜಾಥ್ಯಿತ್ಯ ನೀಡಲಾಗುತ್ತಿದೆ. ಆತ ಸಾಕ್ಷಿಗಳನ್ನು ಸಂಬಾಳಿಸಿಕೊಂಡು, ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿಗೆ ಸಿಕ್ಕಿರುವ ಪವಿತ್ರ ಅಧಿಕಾರ ಬಳಕೆಯಾಗುತ್ತಿದೆ. ಇದು ನಾಚಿಕೆಗೇಡು ಮಾತ್ರವಲ್ಲ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿಸ್ಸಾಹಯಕತೆಯನ್ನು ತೋರಿಸುತ್ತಿದೆ,” ಎಂದು ಆರೋಪಿಸಿದರು.

“ಗುತ್ತಿಗೆದಾರರ ಸಂಘದ ಅಧ್ಯಕ್ಷ, ಹಿರಿಯ ಜೀವ ಕೆಂಪಣ್ಣ, ರಾಜ್ಯ ಸರಕಾರದ ಭ್ರಷ್ಟಾಚಾರವನ್ನು ಬಯಲಿಗೆ ಎಳೆದರು. 40% ಕಮಿಷನ್ ಕೊಡದೆ ಯಾವ ಕೆಲಸಗಳೂ ಆಗುತ್ತಿಲ್ಲ ಎಂದು ದೂರಿದರು. ಈ ಸಮಯದಲ್ಲಿ ಖುದ್ದು ಮುಖ್ಯಮಂತ್ರಿ, ಇವೆಲ್ಲಾ ಬರೀ ಆರೋಪಗಳು, ಸಾಕ್ಷಿ ಕೊಡಿ ಎಂದರು. ಸರಕಾರದ ಎದುರು ಜನರ ತೆರಿಗೆ ಕಳ್ಳತನವಾಗುತ್ತಿದೆ ಎಂದು ಆರೋಪ ಮುಂದಿಟ್ಟ ಕೆಂಪಣ್ಣ ಅವರನ್ನು ಸರಕಾರಿ ರಜಾ ದಿನ ನೋಡಿಕೊಂಡು ಬಂಧಿಸಿದರು. ಈ ಪ್ರಕರಣದಲ್ಲಿ ಅಗತ್ಯ ಮೀರಿ ಅಧಿಕಾರ ದುರ್ಬಳಕೆ ಮಾಡಿಕೊಂಡಿತು ಸರಕಾರ,’’ ಎಂದರು.

ಆದರೆ ಇದೀಗ, “ತಮ್ಮ ಶಾಸಕನ ಲಂಚಾವತಾರ ಸಾಕ್ಷಿ ಸಮೇತ ಬಯಲಿಗೆ ಬಂದಾಗ ಮುಖ್ಯಮಂತ್ರಿಗಳು ತಮ್ಮ ಪದವಿಯನ್ನು ಮರೆತಂತೆ ವರ್ತಿಸುತ್ತಿದ್ದಾರೆ. ಆರೋಪಿಯ ರಕ್ಷಣೆಗೆ ನಿಂತಿದ್ದಾರೆ. ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ಕರ್ನಾಟಕ ಈ ಕೆಳಕಂಡ ಹಕ್ಕೊತ್ತಾಯಗಳನ್ನು ಮುಂದಿಡುತ್ತಿದೆ. ಇವುಗಳು 24 ಗಂಟೆಯೊಳಗೆ ಈಡೇರದೆ ಹೋದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಬಳಿ ಬುಧವಾರ ಪಕ್ಷ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ,” ಎಂದು ಎಚ್ಚರಿಕೆ ನೀಡಿದರು.

ಹಕ್ಕೊತ್ತಾಯಗಳು : 1. ಮಾಡಾಳ್ ವಿರೂಪಾಕ್ಷಪ್ಪ ಅಕ್ರಮ ಲಂಚ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲು ನಿಸ್ಸಾಹಯಕರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು.

2. ಮಾಡಾಳ್ ವಿರೂಪಾಕ್ಷಪ್ಪನನ್ನು ಕೂಡಲೇ ಬಂಧಿಸಿ, ಜನರಿಗೆ ಕಾನೂನಿನ ಬಗೆಗೆ ಇರುವ ಗೌರವವನ್ನು ಕಾಪಾಡಬೇಕು.

3. ಚುನಾವಣೆ ಸಮಯದಲ್ಲಿ ಅಕ್ರಮ ಹಣ ಸಂಗ್ರಹದಲ್ಲಿ ತೊಡಗಿರುವ ಹಿನ್ನಲೆಯಲ್ಲಿ, ರಾಜ್ಯದ ಎಲ್ಲಾ ಶಾಸಕರು ಹಾಗೂ ಮಂತ್ರಿಗಳ ಗೃಹ ಹಾಗೂ ಕಚೇರಿಯನ್ನು ತಪಾಸಣೆಗೆ ಒಳಪಡಿಸಬೇಕು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ