CrimeNEWSನಮ್ಮಜಿಲ್ಲೆ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅರಣ್ಯ ಕೈಗಾರಿಕೆಗಳ ನಿಗಮದ ಅಧಿಕಾರಿಗೆ 3 ವರ್ಷ ಜೈಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಆದಾಯಕ್ಕಿಂತ ಹೆಚ್ಚು ಹಣ ಸಂಗ್ರಹಿಸಿದ್ದ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆಗಳ ನಿಗಮದ ಸಹಾಯಕ ವ್ಯವಸ್ಥಾಪಕರೊಬ್ಬರಿಗೆ ಕೋರ್ಟ್‌ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆಗಳ ನಿಗಮದ ಸಹಾಯಕ ವ್ಯವಸ್ಥಾಪಕ ಶಾಂತಕುಮಾರ್ ಎಂಬುವರೆ ಆರೋಪ ಸಾಬೀತಾದ್ದರಿಂದ ಜೈಲು ಶಿಕ್ಷಗೆ ಒಳಗಾದವರು.

ಬೆಂಗಳೂರಿನ 48ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಅಧಿಕಾರಿ ಶಾಂತಕುಮಾರ್ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷಿ ವಿಧಿಸಿ ಆದೇಶ ಹೊರಡಿಸಿದೆ.

ಲೋಕಾಯುಕ್ತ ಪೊಲೀಸರು ಕಳೆದ 2009ರಲ್ಲಿ ಶಾಂತಕುಮಾರ್ ವಿರುದ್ಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆ ವೇಳೆ 84.42 ಲಕ್ಷ ರೂ.ಸಿಕ್ಕಿತ್ತು. ಇದು ಅಧಿಕಾರಿಯ ಆದಾಯ ಮೂಲಕ್ಕಿಂತ ಶೇ. 122ರಷ್ಟು ಹೆಚ್ಚಿದೆ ಎನ್ನಲಾಗಿತ್ತು.

ಈ ಅಂಶವನ್ನು ಆಧರಿಸಿ ಜಾರಿ ನಿರ್ದೇಶನಾಲಯ ಅಕ್ರಣ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿತ್ತು. ನಂತರ ಆರೋಪಿತ ಅಧಿಕಾರಿ ವಿರುದ್ಧ ಇಡಿ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಧಿಕಾರಿಯನ್ನು ಅಪರಾಧಿ ಎಂದು ಪರಿಗಣಿಸಿ ಈ ಮೇಲಿನ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ