CrimeNEWSನಮ್ಮಜಿಲ್ಲೆ

ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಾಬೀತದ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಪ್ ಎಕ್ಸ್‌ಪ್ರಸ್‌ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 50 ಲಕ್ಷ ರೂ. ದಂಡ ವಿಧಿಸಿ ಕೋರ್ಟ್‌ ಆದೇಶಿಸಿದೆ.

ನ್ಯಾಯಾಧೀಶ ಸತೀಶ್ ಜೆ.ಬಾಲಿ ಅವರು ಆಪಾದಿತರಿಗೆ 3 ವರ್ಷ ಕಠಿಣ ಶಿಕ್ಷೆ ಹಾಗೂ 50 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದು, ದಂಡ ಪಾವತಿಸಲು ವಿಫಲವಾದಲ್ಲಿ 6 ತಿಂಗಳುಗಳ ಕಾಲ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.

ಆಪಾದಿತ ಆರಂಭದಲ್ಲಿ ಇಲಾಖೆಗೆ ಅಬಕಾರಿ ಗಾರ್ಡ್ ಆಗಿ ಸೇವೆಗೆ ಸೇರಿದ್ದು, ಪ್ರಸ್ತುತ ಅವರ ಆಸ್ತಿ 171 ಪಟ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಸೋರ್ಸ್ ಮೇರೆಗೆ ಡಿ.ಟಿ.ಶ್ರೀನಿವಾಸ್ ಪೊಲೀಸ್ ಅಧೀಕ್ಷಕರು ಪ್ರಕರಣ ದಾಖಲಿಸಿ, 53 ಸಾಕ್ಷಿದಾರರು ಮತ್ತು 559 ದಾಖಲಾತಿಗಳನ್ನು ಹಾಜರುಪಡಿಸಿದ್ದರು.

ಪೊಲೀಸ್ ಅಧೀಕ್ಷಕರ ಆದೇಶದಂತೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಡಾ.ಎಸ್.ಪ್ರಕಾಶ್ ಹಾಗೂ ಗೌತಮ್ ತನಿಖೆ ನಡೆಸಿದ್ದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?