NEWSನಮ್ಮಜಿಲ್ಲೆನಮ್ಮರಾಜ್ಯ

ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಪಿಎಸ್ ಪಿಂಚಿಣಿದಾರರ 82ನೇ ಮಾಸಿಕ ಸಭೆ ಇದೇ ನ.3ರ ಭಾನುವಾರದಂದು ಲಾಲ್‌ಬಾಗ್ ಆವರಣದಲ್ಲಿ ಜರುಗಲಿದೆ ಎಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆ ಕಾರ್ಯಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ನಂಜುಂಡೇಗೌಡ ಅವರು, ಅಂದು ಬೆಳಗ್ಗೆ 8 ಗಂಟೆಗೆ ಸಭೆ ಆರಂಭವಾಗಲಿದ್ದು ಎಲ್ಲ ನಿವೃತ್ತರೂ ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಇದೇ ನ.6ರಂದು ಕಾರ್ಯಕಾರಿ ಸಮಿತಿ (ಸಿಬಿಟಿ) ಪೂರ್ವಭಾವಿ ಸಭೆ ದೆಹಲಿಯಲ್ಲಿನ ಇಪಿಎಫ್ಒ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿದ್ದು, ಆ ಸಭೆಯಲ್ಲಿ ಇಪಿಎಸ್ ನಿವೃತ್ತರ ಕನಿಷ್ಠ ಹಾಗೂ ಹೆಚ್ಚುವರಿ ಪಿಂಚಣಿಗೆ ಸಂಬಂಧಿಸಿದಂತೆ (ನ್ಯಾಯಾಲಯದ ತೀರ್ಪು ಒಳಗೊಂಡಂತೆ) ಚರ್ಚಿಸಿದ ನಂತರ ನವಂಬರ್ 23ರಂದು 236ನೇ ಸಿಬಿಟಿ ಸಭೆ ದೆಹಲಿಯಲ್ಲಿ ಉದ್ಯೋಗ ಹಾಗೂ ಕಾರ್ಮಿಕ ಖಾತೆಯ ಸಚಿವರಾದ(minister for labour & employment)ಶ್ರೀ ಮುನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ನಮ್ಮ ಎಲ್ಲ ಬೇಡಿಕೆಗಳ ಬಗ್ಗೆ ಅಂದೇ ಚರ್ಚಿಸಿ, ನಿರ್ಣಯಿಸುವ ಸಾಧ್ಯತೆ ನಿಚ್ಚಳವಾಗಿದೆ. ಸಪ್ಟೆಂಬರ್ 1, 2014 ಕ್ಕೆ ಪೂರ್ವ ಹಾಗೂ ನಂತರ ನಿವೃತ್ತರಾದವರಿಗೆ ಸಂಬಂಧಿಸಿದಂತೆ ಯಾವ ರೀತಿ ಲೆಕ್ಕ ತಕ್ತೆಯನ್ನು ಸಿದ್ಧಪಡಿಸಬೇಕು ಎಂಬ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ತನ್ನ ತೀರ್ಪಿನಲ್ಲಿ ನೀಡಿರುವ ಅಂಶಗಳು. ಆದರೆ ಅಧಿಕಾರಿಗಳು ಇದನ್ನು ವಿಭಿನ್ನವಾಗಿ ಅರ್ಥೈಸಿರುವ ರೀತಿ, ಈ ಎಲ್ಲ ವಿಷಯಗಳ ಬಗ್ಗೆ ಮಾಸಿಕ ಸಭೆಯಲ್ಲಿ ಚರ್ಚಿಸಲಾಗುವುದು.

ಸಭೆಗೆ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿ, ಜತೆಗೆ ಚಿಕ್ಕಬಳ್ಳಾಪುರದ ಕೆಎಸ್ಆರ್‌ಟಿಸಿ, ಕ್ಷೇಮಾಭಿವೃದ್ಧಿ ಸಂಘದ ಎಲ್ಲ ಪದಾಧಿಕಾರಿಗಳು/ ಸದಸ್ಯರು ಭಾಗವಹಿಸಲಿದ್ದು, ಮುಖಂಡರು ನಮ್ಮ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.

ಹೀಗಾಗಿ ಎಲ್ಲರೂ ವಿಶ್ವ ಪಾರಂಪರಿಕ ಲಾಲ್‌ಬಾಗ್ ಹೂತೋಟದಲ್ಲಿ ವಾಯು ವಿಹಾರ ನಡೆಸಿ, ತಮ್ಮ ಹಳೆಯ ಸ್ನೇಹಿತರ ಭೇಟಿ, ವಿಚಾರ ವಿನಿಮಯ ಜತೆಗೆ ಈ ಎಲ್ಲ ಅಂಶಗಳ ಬಗ್ಗೆ ಚರ್ಚಿಸಲು ಆಗಮಿಸಿ ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ ಸಿಮೆಂಟ್ ಲಾರಿಗೆ ಕಾರು ಡಿಕ್ಕಿ: ತಂದೆ, 2ವರ್ಷದ ಮಗು ಮೃತ, ತಾಯಿ ಸ್ಥಿತಿ ಗಂಭೀರ KSRTC: ವಾರದೊಳಗೆ ವೇತನ ಹೆಚ್ಚಳದ 38ತಿಂಗಳ ಹಿಂಬಾಕಿ ನಿವೃತ್ತ ನೌಕರರ ಬ್ಯಾಂಕ್‌ ಖಾತೆಗೆ ಜಮಾ!