NEWSಉದ್ಯೋಗನಮ್ಮಜಿಲ್ಲೆ

ಇಂಜಿನಿಯರಿಂಗ್ ಪದವೀಧರರಿಗೆ ತಿಂಗಳಿಗೆ 15 ಸಾವಿರ ಶಿಷ್ಯವೇತನ- ಅರ್ಜಿ ಸಲ್ಲಿಕ್ಕೆ ಅವಧಿ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ IISC, IIT ಮತ್ತು NIT ಮೂಲಕ Artificial Intelligence and Machine Learning ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ-ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.

6 ರಿಂದ 12 ತಿಂಗಳ ಅವಧಿಯ ವೃತ್ತಿಪರ ತರಬೇತಿ ಕೋರ್ಸ್ ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಮಾಸಿಕ ರೂ.15.000 ಶಿಷ್ಯವೇತನ /ತರಬೇತಿ ನೀಡುವ ಸಂಬಂಧ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಶಿಷ್ಯವೇತನ ನೀಡಲಾಗುತ್ತದೆ.

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಗಳಲ್ಲಿ ಬಿ.ಇ/ಬಿ.ಟೆಕ್ ಕೋರ್ಸ್ಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಶಿಷ್ಯವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದ ಒಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಅಭ್ಯರ್ಥಿಯು ಬಿ.ಇ/ಬಿ.ಟೆಕ್ ಕೋರ್ಸ್ಗಳಲ್ಲಿ ಕನಿಷ್ಟ ಶೇ.55% ರಷ್ಟು ಕಡ್ಡಾಯವಾಗಿ ಅಂಕ ಗಳಿಸಿರಬೇಕು ಕೋರ್ಸ್ ಅವಧಿಯು ಗರಿಷ್ಠ 2 ವಾರಗಳಾಗಿರುತ್ತದೆ. ಅಭ್ಯರ್ಥಿಯ ಕುಟುಂಬ ಆದಾಯ ರೂ.5.00 ಲಕ್ಷಗಳನ್ನು ಮೀರಿರಬಾರದು. ಮೂಲನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ ಸೂಕ್ಷ್ಮ/ ಅತೀ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ವಿದ್ಯಾರ್ಥಿಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.

IISc IIT ಮತ್ತು NIT ಸಂಸ್ಥೆಗಳ ಹೊರತುಪಡಿಸಿ ಬೇರೆ ವಿದ್ಯಾಸಂಸ್ಥೆಗಳಲ್ಲಿ ತರಬೇತಿ ಪಡೆಯಲು ಅಭ್ಯರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅವಕಾಶವಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ಏಪ್ರಿಲ್ 25 ಕೊನೆಯ ದಿನ, ನಂತರ ಬಂದ ಅರ್ಜಿಗಳನ್ನು ಪರಿಗಣಸಲಾಗುವುದಿಲ್ಲ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ ಸಂ- 080-29787448 ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ ತಾಲ್ಲೂಕುಗಳಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ