CrimeNEWSಕೃಷಿನಮ್ಮಜಿಲ್ಲೆ

ಹಾಸನ ಜಿಲ್ಲೆ ಮಲೆನಾಡು ಭಾಗದಲ್ಲಿ 50ಕ್ಕೂ ಹೆಚ್ಚು ಕಾಡಾನೆಗಳ ಉಪಟಳ – ಬೆಳೆ ನಾಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಕಾಫಿ ತೋಟದಲ್ಲಿ 50ಕ್ಕೂ ಹೆಚ್ಚು ಆನೆಗಳ ತಂಡ ಬೀಡುಬಿಟ್ಟಿದ್ದು, ಅವುಗಳ ಉಪಟಳಕ್ಕೆ ಜಮೀನುಗಳಲ್ಲಿ ವಿವಿಧ ಫಸಲುಗಳನ್ನು ಒಡ್ಡಿದ್ದ ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯ ಮಲೆನಾಡಿನಲ್ಲಿ ಕಾಡಾನೆಗಳ ಹಿಂಡು ದಾಂಗುಡಿ ಇಟ್ಟಿದ್ದು ರೈತರು ಫಸಲುಗಳನ್ನು ತುಳಿದು ತಿಂದು ನಾಶ ಮಾಡುತ್ತಿವೆ. ಈ ಮಲೆನಾಡು ಭಾಗದಲ್ಲಿ ಈಗಲೂ ಕಾಡಾನೆಗಳ ಉಪಟಳ ಮುಂದುವರಿದಿದೆ. ಇವುಗಳ ದಾಳಿಗೆ ಸಕಲೇಶಪುರ ತಾಲೂಕಿನ ಬೈಕೆರೆ, ನಾರ್ವೆಪೇಟೆ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

50 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ನಾಟಿ ಮಾಡಿದ್ದ ಭತ್ತದ ಗದ್ದೆಯಲ್ಲೆಲ್ಲಾ ಓಡಾಡಿ, ತುಳಿದು ನಾಶ ಮಾಡಿವೆ. ಕಾಫಿ ತೋಟದಲ್ಲಿ ಮನಬಂದಂತೆ ಓಡಾಡುತ್ತಿರುವುದರಿಂದ ಕಾಫಿ ಗಿಡಗಳೂ ನಾಶಗೊಂಡಿವೆ. ರೈತರು ಬೆಳೆದಿದ್ದ ಬಾಳೆ, ಅಡಿಕೆ ಗಿಡಗಳನ್ನು ನಾಶ ಮಾಡಿವೆ. 20 ವರ್ಷಗಳಿಂದ ಬೆಳೆದಿದ್ದ ಕಾಫಿ ತೋಡವನ್ನು ತುಳಿದು ನಾಶಮಾಡಿದ್ದು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗ್ರಾಮದ ಗಿಡ್ಡಪ್ಪ, ಚಂದ್ರೇಗೌಡ, ಮಲ್ಲೇಶ್ ಹಾಗೂ ಇತರ ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿ ಹೋಗಿದ್ದಾರೆ. ಪ್ರತಿನಿತ್ಯ ಕಾಡಾನೆಗಳಿವೆ ಎಚ್ಚರಿಕೆಯಿಂದ ಓಡಾಡುವಂತೆ ಮಾಹಿತಿ ನೀಡುವ ಅರಣ್ಯ ಇಲಾಖೆ ಸಿಬ್ಬಂದಿ ಇಷ್ಟೊಂದು ಪ್ರಮಾಣದಲ್ಲಿ ಬೆಳೆ ನಾಶವಾಗಿದ್ದರೂ ಇತ್ತ ತಿರುಗಿ ನೋಡಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇಲೂರು ತಾಲೂಕಿನ ಸುಲಗಳಲೆ ಗ್ರಾಮದಲ್ಲೂ ಕಾಡಾನೆಗಳ ಹಿಂಡು ದಾಳಿ ಮಾಡಿ ಕಾಫಿ, ಮೆಣಸು, ತೆಂಗು, ಕಿತ್ತಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ. 50ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಂಧಲೆ ನಡೆಸಿದ್ದು, ಕಾಫಿ ತೋಟದಲ್ಲಿದ್ದ ನೀರಾವರಿ ಪೈಪ್‌ಗಳನ್ನು ತುಳಿದು ಹಾಕಿವೆ.

ಗ್ರಾಮದ ದೇವರಾಜ್, ಜಗದೀಶ್, ಕೆಂಚೇಗೌಡ, ರಾಮಚಂದ್ರ ಎಂಬುವವರ ಕಾಫಿ ತೋಟದಲ್ಲಿ ಬೆಳೆ ನಾಶವಾಗಿದ್ದು, ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

50ಕ್ಕೂ ಹೆಚ್ಚು ಆನೆಗಳು ಒಮ್ಮೆಲೇ ಕಾಫಿ ತೋಟದ ಒಳಗೆ ಅಟ್ಟಹಾಸ ಮೆರೆದಿವೆ. 2-3 ಎಕರೆ ತೋಟಗಳು ಸಂಪೂರ್ಣ ಹಾಳಾಗಿದೆ. ಇದರಿಂದ ರೈತರು ಕಂಗಾಲಾಗಿದ್ದು ಕಣ್ಣೀರು ಹಾಕುತ್ತಿದ್ದಾರೆ. ಕೃಷಿ ಮಾಡಿಕೊಂಡು ಬದುಕುತ್ತಿದ್ದ ಜನರನ್ನು ಆನೆಗಳ ಉಪಟಳ ನಿರಂತರವಾಗಿ ಕಾಡುತ್ತಿದೆ. ಬಹುತೇಕ ಕೃಷಿ ನೀರಾವರಿ ಪೈಪ್‌ಗಳು ಆನೆಗಳ ದಾಳಿಗೆ ಒಳಗಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಹೆಚ್ಚು ಮರಿಗಳಿರುವ ಕಾಡಾನೆಗಳ ಹಿಂಡು ಗ್ರಾಮದ ಬಳಿಯೇ ಬೀಡುಬಿಟ್ಟಿದ್ದು, ಜೀವಭಯದಿಂದ ಕಾಫಿ ತೋಟಕ್ಕೆ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ