NEWSದೇಶ-ವಿದೇಶನಮ್ಮರಾಜ್ಯಶಿಕ್ಷಣ-

ದೇಶದ ಶೇ.80ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟ ಪರಿಸ್ಥಿತಿಯಲ್ಲಿವೆ : ಪ್ರಧಾನಿಗೆ ಪತ್ರ ಬರೆದ ಕೇಜ್ರಿವಾಲ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನಮ್ಮ ದೇಶದಲ್ಲಿ ಶೇ.80ಕ್ಕೂ ಹೆಚ್ಚಿನ ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟ ಪರಿಸ್ಥಿತಿಯಲ್ಲಿವೆ ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ಶಾಲೆಗಳ ದುಸ್ಥಿತಿಯನ್ನು ಅರಿಯಬೇಕೆಂದು ತಿಳಿಸಿದ್ದಾರೆ.

ಕಳೆದ ಸೋಮವಾರವಷ್ಟೇ ಶಿಕ್ಷಕರ ದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶಾದ್ಯಂತ 14,500 ಶಾಲೆಗಳನ್ನು ‘ಪಿಎಂ ಶ್ರೀ ಯೋಜನೆ’ ಅಡಿಯಲ್ಲಿ ಅಭಿವೃದ್ಧಿ ಹಾಗೂ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಿದ್ದರು.

ಈ ಯೋಜನೆಯ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಲ್ಯಾಬ್‌ಗಳು, ಸ್ಮಾರ್ಟ್ ತರಗತಿಗಳು, ಗ್ರಂಥಾಲಯಗಳು ಮತ್ತು ಕ್ರೀಡಾ ಸೌಲಭ್ಯಗಳು ಸೇರಿದಂತೆ ಆಧುನಿಕ ಮೂಲ ಸೌಕರ್ಯಗಳನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದ್ದರು.

ಈ ಸಂಬಂಧ ಬುಧವಾರ ಪತ್ರ ಬರೆದಿರುವ ಕೇಜ್ರಿವಾಲ್ ಅವರು, ನರೇಂದ್ರ ಮೋದಿಯವರು ದೇಶದಲ್ಲಿ 14,500 ಶಾಲೆಗಳನ್ನು ಆಧುನೀಕರಿಸುವ ನಿರ್ಧಾರ ತಿಳಿಸಿದ್ದಾರೆ. ಆದರೆ ಅದು ಸಾಗರದಲ್ಲಿನ ಹನಿ ನೀರಿಗೆ ಸಮ. ಈ 14 ಸಾವಿರ ಅನ್ನೊದನ್ನು ಬಿಟ್ಟು ದೇಶದ ಎಲ್ಲ 10 ಲಕ್ಷ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸುವಂತೆ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಭಾರತದಲ್ಲಿ ನಿತ್ಯ 27 ಕೋಟಿ ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದು, ಅದರಲ್ಲಿ ಹೆಚ್ಚು ಅಂದರೆ 18 ಕೋಟಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೋಗುತ್ತಿದ್ದಾರೆ. ಆದರೆ, ವಿಪರ್ಯಾಸವೆಂದರೆ ಶೇ.80 ರಷ್ಟು ಸರ್ಕಾರಿ ಶಾಲೆಗಳ ಸ್ಥಿತಿ ಜಂಕ್‌ಯಾರ್ಡ್‌ಗಿಂತ ಕೆಟ್ಟದಾಗಿದೆ. ಇಂತಹ ಕಳಪೆ ಶಿಕ್ಷಣವನ್ನು ನಮ್ಮ ಕೋಟಿಗಟ್ಟಲೆ ಮಕ್ಕಳಿಗೆ ನೀಡುತ್ತಿದ್ದರೆ. ಇದರಿಂದ ದೇಶ ಹೇಗೆ ಅಭಿವೃದ್ಧಿ ಹೊಂದುತ್ತದೆ ಎಂದು ಒಮ್ಮೆ ಊಹಿಸಿಕೊಳ್ಳಿ ಪ್ರಧಾನಿಗಳೆ.

ನೀವು 14,500 ಶಾಲೆಗಳ ಆಧುನೀಕರಣಕ್ಕೆ ಯೋಜನೆ ರೂಪಿಸಿದ್ದೀರಿ. ಆದರೆ ಈ ವೇಗದಲ್ಲಿ ಪ್ರತಿ ವರ್ಷ ಕೆಲಸ ಮಾಡಿದರೆ, ನಮ್ಮ ಎಲ್ಲ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕನಿಷ್ಠ 100 ವರ್ಷಗಳಾದರೂ ಬೇಕಾಗುತ್ತದೆ. ದೇಶದ ಎಲ್ಲ 10 ಲಕ್ಷ ಸರ್ಕಾರಿ ಶಾಲೆಗಳ ಪುನರಾಭಿವೃದ್ಧಿಗೆ ಯೋಜನೆಯನ್ನು ಸಿದ್ಧಪಡಿಸಲು ನಾನು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...