NEWSನಮ್ಮರಾಜ್ಯಬೆಂಗಳೂರುಸಂಪಾದಕೀಯ

KSRTC ಬಸ್‌ನಲ್ಲೇ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ: ಮಾನವೀಯತೆ ಮೆರೆದ ಚಾಲಕ, ನಿರ್ವಾಹಕಿ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ತುಂಬು ಗರ್ಭಿಣಿಗೆ ಬಸ್‌ನಲ್ಲೇ ಮಗು ಜನಿಸಿದ್ದು ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಬಸ್‌ ಕಂಡಕ್ಟರ್‌ ವಸಂತ ಹೇಳಿದ್ದಾರೆ.

ಚನ್ನರಾಯಪಟ್ಟಣ-ಹಾಸನ ಮಾರ್ಗವಾಗಿ ಬಸ್‌ ಚಲಿಸುತಿತ್ತು ಈ ವೇಳೆ ಮಾರ್ಗಮಧ್ಯೆಯೇ ಮಹಿಳೆ ಬಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ವಿವರ: ಕೂಲಿ ಕೆಲಸಕ್ಕೆಂದು ಮೂಡುಗೆರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಸೋಮವಾರ ಮಹಿಳೆ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್ ಅನ್ನು ನಿಲ್ಲಿಸಿದ್ದಾರೆ. ಬಳಿಕ ಬಸ್‌ನ ನಿರ್ವಾಹಕಿ ವಸಂತ ಅವರು ಗರ್ಭಿಣಿಗೆ ಹೆರಿಗೆ ಮಾಡಿಸಲು ಸಹಾಯ ಮಾಡಿದ್ದಾರೆ.

ಮಹಿಳೆ ಬಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಬಳಿಕ ಅಂಬುಲೆನ್ಸ್‌ಗೆ ಕರೆ ಮಾಡಿ ತಾಯಿ ಹಾಗೂ ಮಗುವನ್ನು ಶಾಂತಿಗ್ರಾಮದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ. ಬಳಿಕ ಬಸ್‌ನ ಚಾಲಕ, ನಿರ್ವಾಹಕರು ಹಾಗೂ ಪ್ರಯಾಣಿಕರು ಆಸ್ಪತ್ರೆಗೆ ತೆರಳಿ ಮಹಿಳೆಗೆ ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಸರಿಯಾದ ಸಮಯದಲ್ಲಿ ಮಹಿಳೆಗೆ ಬಸ್‌ನಲ್ಲಿಯೇ ಹೆರಿಗೆ ಮಾಡಿಸಿ, ಆಸ್ಪತ್ರೆಗೆ ದಾಖಲಿಸಿ, ಆಕೆಗೆ ಹಣದ ಸಹಾಯ ಮಾಡಿರುವ ಬಸ್ ಚಾಲಕ – ನಿರ್ವಾಹಕಿ ಹಾಗೂ ಪ್ರಯಾಣಿಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನು ಬಡತನದ ಬೇಗೆಯಲ್ಲಿ ತಾನು ತುಂಬು ಗರ್ಭಿಣೆ ಎಂಬುದನ್ನು ಲೆಕ್ಕಿಸದೆ ತುತ್ತು ಕೂಳಿಗಾಗಿ ದೂರದೂರಿಗೆ ಕೂಲಿ ಅರಸಿ ಪ್ರಯಾಣಬೆಳೆಸಿದ ಮಹಿಳೆಯ ಸ್ವಾಭಿಮಾನವನ್ನು ಇಲ್ಲಿ ನಾವು ಸ್ಮರಿಸಲೇಬೇಕಿದೆ. ಇಂಥ ದಿಟ್ಟ ಮಹಿಳೆಯರು ನಾಡಿಗೆ ಹೆಮ್ಮೆ ಎಂದೇ ಹೇಳಬಹುದು.

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ