
ಬೆಂಗಳೂರು ಗ್ರಮಾಂತರ: ಜಿಲ್ಲಾಡಳಿತ ಭವನದ ಸಂಸದರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ.ಸುಧಾಕರ್ ಅಹವಾಲು ಸ್ವೀಕರಿಸಿದರು.
Advertisemet
ಬಳಿಕ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಾರ್ವಜನಿಕರ, ತಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಪ್ರತಿ ಸೋಮವಾರ ಹಮ್ಮಿಕೊಳ್ಳಲಾಗುತ್ತಿದ್ದು ಇದರ ಲಾಭ ಪಡೆದುಕೊಳ್ಳಿ ಎಂದು ಹೇಳಿದರು.
ಇನ್ನು ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿಗದಿತ ಕಾಲ ಮಿತಿಯಲ್ಲಿ ಬಗೆಹರಿಸಲು ಸೂಚಿಸಲಾಗುವುದು. ಸಾರ್ವಜನಿಕರು ಪ್ರತಿ ಸೋಮವಾರ ತಮ್ಮ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದರು.