CrimeNEWSನಮ್ಮರಾಜ್ಯ

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಸಿಕ್ಕಿತು ಮೇಜರ್ ಟ್ವಿಸ್ಟ್ !!

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾರು ಚಾಲಕನಾಗಿದ್ದ ಕಾರ್ತಿಕ್‌ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಬಿಜೆಪಿ ನಾಯಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ ದಾಖಲಾದ ಮೇಲೆ ಕಾರ್ತಿಕ್ ವಿಡಿಯೋದಲ್ಲಿ ತನ್ನ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾನು 15 ವರ್ಷಗಳಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಕಳೆದ ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ದರು. ಹಿಂಸೆ ಕೊಟ್ಟಿದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದು ತಿಳಿಸಿದ್ದಾರೆ.

ಇನ್ನು ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಎಚ್‌.ಡಿ. ರೇವಣ್ಣ ಅವರ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ನಾನು ದೇವರಾಜೇಗೌಡ ಬಳಿ ಹೋದೆ. ಆ ವೇಳೆ ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದರು.

ಆಗ ದೇವರಾಜೇಗೌಡ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ಕೊಡು ನಾನು ಯಾರಿಗೂ ತೋರಿಸಲ್ಲ ಎಂದು ಕೇಳಿದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ ಎಂದು ಡ್ರೈವರ್ ಕಾರ್ತಿಕ್ ಹೇಳಿದ್ದಾರೆ.

ಮುಂದುವರಿದು ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಅಶ್ಲೀಲ ವಿಡಿಯೋ ಕಾಪಿಯನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋದು ಗೊತ್ತಿಲ್ಲ. ಹೊಳೆನರಸೀಪುರದ ಬಿಜೆಪಿ ಅಭ್ಯರ್ಥಿಯಾಗಿದ್ದ ದೇವರಾಜೇಗೌಡ ಅವರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ಪೆನ್‌ಡ್ರೈವ್ ಕೊಟ್ಟಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇನ್ನು ಪೆನ್‌ಡ್ರೈವ್ ಯಾರು ಹಂಚಿದರೋ ನನಗೆ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ. ಅಶ್ಲೀಲ ವಿಡಿಯೋ ಬಿಡುಗಡೆಗೆ ಸ್ಟೇ ತಂದ ಬಗ್ಗೆ ಮೊದಲು ದೇವರಾಜೇಗೌಡರ ಜತೆ ಮಾತಾಡಿದ್ದೆ. ಆಗ ನನ್ನ ಬಳಿ ಇರೋ ಫೋಟೋ, ವಿಡಿಯೋ ಕೊಡು ಎಂದಿದ್ದರು.

ದೇವರಾಜೇಗೌಡ ಅದನನ್ನು ಏನಕ್ಕೆ ಬಳಕೆ ಮಾಡಿಕೊಂಡ್ರೋ ಗೊತ್ತಿಲ್ಲ ಎಂದು ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ವಿವರಿಸಿದ್ದಾರೆ. ಇನ್ನು ಈಗಾಗಲೇ ದೇಶಾದ್ಯಂತ ರಾಜಕೀಯವಾಗಿ ಬಿರುಗಾಳಿಯನ್ನೇ ಎಬ್ಬಿಸಿರುವ ಪೆನ್‌ಡ್ರೈವ್ ಬಹಿರಂಗಗೊಂಡ ಪ್ರಕರದ ಹಿಂದೆ ಯಾರಾರು ಇದ್ದರೆ ಎಂಬುವುದೇ ಒಂದು ರೋಚಕವಾಗುವಂತೆ ಕಾಣುತ್ತಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ