NEWSದೇಶ-ವಿದೇಶನಮ್ಮರಾಜ್ಯ

MSRTC: 7ನೇ ವೇತನ ಆಯೋಗ ಅನ್ವಯಿಸಲು ಆಗ್ರಹಿಸಿ ಆ.9ರಿಂದ ನೌಕರರು ಹಮ್ಮಿಕೊಂಡಿದ್ದ ಮುಷ್ಕರ ಸಿಎಂ ಮಧ್ಯಪ್ರವೇಶದಿಂದ 1ವಾರ ಮುಂದೂಡಲು 13 ಸಂಘಟನೆಗಳ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಆ.9ರಿಂದ ಅಂದರೆ ನಾಳೆಯಿಂದ ಮತ್ತೊಮ್ಮೆ ಮುಷ್ಕರಕ್ಕೆ ಕರೆ ನೀಡಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಾರಿಗೆ ನೌಕರರ ಮುಖಂಡರೊಂದಿಗೆ ಸಭೆಕರೆದು ಚರ್ಚಿಸಿದ ಬಳಿಕ ಆಗಸ್ಟ್ 9 ರಂದು ಹಮ್ಮಿಕೊಂಡಿದ್ದ  ಮುಷ್ಕರವನ್ನು ಒಂದು ವಾರ ಮುಂದೂಡಿ  ಬೇಡಿಕೆ ಈಡೇರಿಕೆಗೆ ಗಡುಡವು ವಿಧಿಸಿದ್ದಾರೆ.

ರಾಜ್ಯ ಸಾರಿಗೆ ನಿಗಮದ ನೌಕರರ ಸಂಘಟನೆಗಳ ಕ್ರಿಯಾ ಸಮಿತಿಯು ಆಗಸ್ಟ್ 9 ರಿಂದ ಕರೆ ನೀಡಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಅಧ್ಯಕ್ಷತೆಯಲ್ಲಿ ಕ್ರಿಯಾ ಸಮಿತಿ ಸಭೆ ನಡೆಯಿತು. ಈ ವೇಳೆ ನೌಕರರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಒಂದು ವಾರದೊಳಗೆ ವರದಿ ಕೊಡುವಂತೆ ಸಮಿತಿಗೆ ಆದೇಶ ಮಾಡಿದ್ದಾರೆ.

ಇನ್ನು ರಾಜ್ಯ ಸಾರಿಗೆ ಸಂಸ್ಥೆ ಅಂದರೆ ಎಸ್ಟಿ ನೌಕರರು ತಮ್ಮ ಬೇಡಿಕೆ ಈಡೇರಿಕೆಗಾಗಿ  ಮತ್ತೊಮ್ಮೆ ಮುಷ್ಕರ ನಡೆಸಲು ಬಹುತೆಕ ಸಜ್ಜಾಗಿದ್ದಾರೆ. ಹೀಗಾಗಿ ಎಸ್ಟಿ ನೌಕರರ ಸಂಘಟನೆಗಳು ಆಗಸ್ಟ್ 9 ರಿಂದ ಮುಷ್ಕರ ನಡೆಸುವುದಾಗಿ ಎಚ್ಚರಿಕೆಯನ್ನೂ ಕೂಡ ನೀಡಿದ್ದವು. ಇದೀಗ ಎಸ್ಟಿ ನೌಕರರ ಪ್ರತಿಭಟನೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಯಗೊಂಡಿದ್ದು ದಿಢೀರ್‌ ಸಭೆಕರೆದು ಒಂದು ವಾರ ಸಮಯಕೊಡಿ ಎಂದು ಮನವಿ ಮಾಡಿದ್ದಾರೆ.

ಇನ್ನು ನೌಕರರ ಬೇಡಿಕೆಯಂತೆ ಮುಖ್ಯಮಂತ್ರಿಗಳು ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಿದ್ದಾರೆ.  ಅಲ್ಲದೆ ನಿಗಮದ ನೌಕರರ ಬೇಡಿಕೆಗಳ ಈಡೇರಿಕಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಈ ಬೇಡಿಕೆಗಳಿಂದ ಉಂಟಾಗುವ ಆರ್ಥಿಕ ಹೊರೆ ಮತ್ತು ಅವುಗಳನ್ನು ಸಮತೋಲನಗೊಳಿಸುವ ಬಗ್ಗೆ ಉನ್ನತಾಧಿಕಾರಿಗಳ  ಸಮಿತಿಯೊಂದಿಗೆ ಸಭೆ ನಡೆಸುವಂತೆ ಸಾರಿಗೆ ಸಚಿವರಿಗೂ ಸೂಚಿಸಿದರು.

ಇನ್ನು ಕೂಡಲೇ ಸಭೆ ನಡೆಸಿ ವಾರದೊಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆಯೂ ಮುಖ್ಯಮಂತ್ರಿ ಸೂಚಿಸಿದ್ದು, ವಿವರವಾಗಿ ಹೇಳುವುದಾದರೆ, ನೌಕರರಿಗೆ ಏಳನೇ ವೇತನ ಆಯೋಗ ಮಾದರಿಯಲ್ಲೇ ವೇತನ ಪಾವತಿಸಬೇಕು. ಅಗ್ರಿಮೆಂಟ್‌ ಮೂಲಕ ಮಾಡುವ ವೇತನ ಪರಿಷ್ಕರಣೆಗೆ ಬ್ರೇಕ್‌ಹಾಕಬೇಕು ಎಂದು ನೌಕರರ ಸಂಘಟನೆಗಳು ಮುಖಂಡುರ ಒತ್ತಾಯಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರಿ ನೌಕರರಂತೆ ನಿಗಮದ ನೌಕರರಿಗೂ ವಿವಿಧ ಸೌಲಭ್ಯಗಳನ್ನು  ನೀಡಬೇಕು. ಅಗ್ರಿಮೆಂಟ್‌ ಎಂಬ ಭೂತವನ್ನು ಕಿತ್ತೊಗೆಯಬೇಕು. ಇದರೊಂದಿಗೆ ನೌಕರರ ವಿರುದ್ಧ ತೆಗೆದುಕೊಳ್ಳುವ ಶಿಸ್ತು ಮತ್ತು ದಂಡ ವಿಧಿಸುವ ವಿಧಾನದಲ್ಲಿ ಬದಲಾವಣೆ ಆಗಬೇಕು. ಪ್ರಮುಖವಾಗಿ ನಿಗಮದ ಎಲ್ಲ ನೌಕರರಿಗೂ ನಗದು ರಹಿತ ವೈದ್ಯಕೀಯ ಯೋಜನೆ ಅನ್ವಯವಾಗಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಿಎಂ ಜತೆಗೆ 13 ಸಂಘಟನೆಗಳ ಮುಖಂಡರು ಚರ್ಚೆ ನಡೆಸಿದ್ದಾರೆ.

ಎಸ್‌ಟಿ ನೌಕರರಿಗೆ ರಾಜ್ಯ ಸರ್ಕಾರಿ ನೌಕರರಿಗೆ ಸರಿಸಮಾನವಾಗಿ ವೇತನ ನೀಡಬೇಕು ಎಂಬ ಪ್ರಮುಖ ಬೇಡಿಕೆ ಸೇರಿದಂತೆ ಬಾಕಿ ಉಳಿದಿರುವ ಇತರ ಬೇಡಿಕೆಗಳನ್ನು ಈಡೇರಿಸಲು ನೌಕರರು ಮತ್ತೊಮ್ಮೆ ಮುಷ್ಕರದ ಎಚ್ಚರಿಕೆ ನೀಡಿದ್ದು,  ಹೀಗಾಗಿ ರಾಜ್ಯಾದ್ಯಂತ 13 ಎಸ್ಟಿ ನೌಕರರ ಸಂಘಟನೆಗಳು ಮುಷ್ಕರ ಸಂಬಂಧ ಸಭೆ ಸೇರಿ ಏಕ  ತೀರ್ಮಾನ ತೆಗೆದುಕೊಂಡಿವೆ. ಹೀಗಾಗಿ ಬೇಡಿಕೆ ಈಡೇರದಿದ್ದರೆ ಮತ್ತೊಮ್ಮೆ ರಾಜ್ಯದಲ್ಲಿ MSRTC ಬಸ್‌ಗಳು ನಿಲ್ಲುವ ಸಾಧ್ಯತೆ ಹೆಚ್ಚಾಗಿದೆ.

ಜತೆಗೆ ರಾಜ್ಯ ಸಾರಿಗೆ ನೌಕರರ ವಿರುದ್ಧ ನಿಗಮಗಳಲ್ಲಿ ಬಾಕಿ ಇರುವ ಪ್ರಕರಣಗಳ ಪರಿಹಾರಕ್ಕೂ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ನಡುವೆ ರಾಜ್ಯ ಸರ್ಕಾರಿ ನೌಕರರಂತೆ ಭತ್ಯೆ, ವೇತನ ಹೆಚ್ಚಳ ಮಾಡಲು ಈ ಹಿಂಧಿನ  ಒಪ್ಪಂದದಂತೆ ಒಪ್ಪಿಗೆ ನೀಡಲಾಗಿದೆ. ಆದರೆ ಬೇಡಿಕೆಗಳ ಇತ್ಯರ್ಥಕ್ಕೆ ಮುಂದಾದರೂ ಕ್ರಮ ಕೈಗೊಳ್ಳದ ಕಾರಣ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ