CrimeNEWSನಮ್ಮರಾಜ್ಯಸಿನಿಪಥ

ಹತ್ಯೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್​ ಸೇರಿ 9ಮಂದಿಗೆ 6ದಿನಗಳು ಪೊಲೀಸ್‌ ಕಸ್ಟಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಹತ್ಯೆ ಆರೋಪದಡಿ ಬಂಧನಕ್ಕೊಳಗಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಹಾಗೂ ತಂಡಕ್ಕೆ ಕೋರ್ಟ್‌ ಬಿಗ್​ ಶಾಕ್ ನೀಡಿದೆ.

ಇಂದು ಸಂಜೆ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಧೀಶರಾದ ವಿಶ್ವನಾಥ್ ಸಿ. ಗೌಡರ್ ನಟಿ ಪವಿತ್ರಾ ಗೌಡ, ನಟ ದರ್ಶನ್ ಒಳಗೊಂಡ 13ಜನರಿರುವ ತಂಡವನ್ನು 6 ದಿನಗಳು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ.

ರೇಣುಕಾಸ್ವಾಮಿ ಕಿಡ್ನ್ಯಾಪ್ ಹತ್ಯೆ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 13 ಜನ ಬಂಧಿತ ಆರೋಪಿಗಳನ್ನು ಬೆಳಗ್ಗಿಯಿಂದ ಸಂಜೆ 4.30ರವರೆಗೆ ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಧೀಶರು 6 ದಿನಗಳ ಕಾಲ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಒಪ್ಪಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿದ ಪೊಲೀಸರು ಪವಿತ್ರಾ ಗೌಡ A1, ನಟ ದರ್ಶನ್ A2, ಪವನ್ A3 ಆರೋಪಿಯನ್ನಾಗಿ ಮಾಡಿದ್ದು, ಇನ್ನುಳಿದ 10 ಮಂದಿಯೂ ಸಹ ಆರೋಪಿಗಳಾಗಿದ್ದಾರೆ.

24ನೇ ACMM ಕೋರ್ಟ್​ನ ನ್ಯಾಯಧೀಶರ ಮುಂದೆ ದರ್ಶನ್ ಸೇರಿದಂತೆ 8 ಮಂದಿ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಅವರ‍್ಯಾರು ಎಂದರೆ- 1. ಪವಿತ್ರಾ ಗೌಡ, 2. ದರ್ಶನ್, 3. ಪವನ್, 4. ವಿನಯ್, 5. ಪ್ರದೋಷ ,6. ನಂದೀಶ, 7. ದೀಪಕ್, 8. ಲಕ್ಷ್ಮಣ್, 9. ನಾಗರಾಜು.

ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಇಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರು ನಟ ದರ್ಶನ್ ಅವರನ್ನು ಬಂಧಿಸಿದ್ದರು. ಅನ್ನಪೂರ್ಣ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರ ಪ್ರಾಥಮಿಕ ವಿಚಾರಣೆ ನಡೆಸಲಾಗಿತ್ತು. ಇದಾದ ಬಳಿಕ ದರ್ಶನ್ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್‌ಗೆ ಕರೆದುಕೊಂಡು ಹೋಗಲಾಗಿತ್ತು.

ಇನ್ನು ಕೊಲೆ ಪ್ರಕರಣದ ಆರೋಪಿಗಳ ಮೆಡಿಕಲ್ ಚೆಕಪ್ ಮುಗಿಸಿದ ಪೊಲೀಸ್​ ಅಧಿಕಾರಿಗಳು ನಟ ದರ್ಶನ್​ ಹಾಗೂ ತಂಡವನ್ನು 24ನೇ ಎಸಿಎಂಎಂ ಕೋರ್ಟ್​ನಲ್ಲಿ ಹಾಜರುಪಡಿಸಿದರು.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ