CRIMENEWSನಮ್ಮಜಿಲ್ಲೆ

ಎರಡು ಎಕರೆ ಆಸ್ತಿ ವಿವಾದ ಸಾರಿಗೆ ನೌಕರನ ಕೊಲೆ: 10 ಮಂದಿ ವಿರುದ್ಧ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಹಾಸನ: ಸಾರಿಗೆ ಇಲಾಖೆಯ ನೌಕರನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸಾರಿಗೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಾಜನಹಳ್ಳಿ ಗ್ರಾಮದ ನಿವಾಸಿ ವೀರಪ್ಪ (58) ಕೊಲೆಯಾದವರು. ಕುಟುಂಬ ಸದಸ್ಯರ ಆರೋಪದಂತೆ, ದಾಯಾದಿಗಳ ನಡುವೆ ನಡೆಯುತ್ತಿದ್ದ ಆಸ್ತಿ ವಿವಾದವೇ ಈ ಹತ್ಯೆಗೆ ಮೂಲ ಕಾರಣ ಎಂದು ತಿಳಿದು ಬಂದಿದೆ.

ಇನ್ನು ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ ಮತ್ತು ಸ್ವಾಮಿ ಎಂಬುವರೆ ನಮ್ಮ ತಂದೆಯನ್ನು ಹತ್ಯೆ ಮಾಡಿದ್ದಾರೆ ಎಂದು ಈ 10 ಮಂದಿ ವಿರುದ್ಧ ವೀರಪ್ಪ ಅವರ ಮಗ ವಿವೇಕ್ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ಈ ನಡುವೆ ಎರಡು ಎಕರೆ ಆಸ್ತಿಗಾಗಿ ಕೋರ್ಟ್​ ಮೆಟ್ಟಿಲೇರಿದ್ದ ವೀರಪ್ಪ ಅವರನ್ನು ಕೇಸ್ ಮುಗಿಸಿ ಬಂದ ಸಂಜೆಯೇ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಈ ಹತ್ಯೆ ಸಂಬಂಧ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ವೀರಪ್ಪ ಅವರ ಪುತ್ರ ವಿವೇಕ್ ಆಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳವಾರ ಆಲೂರಿನಲ್ಲಿ ನಡೆಯುತ್ತಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದ ವೀರಪ್ಪ ಅವರು ಹಿಂದಿರುಗಿದ ಬಳಿಕ ಸಂಜೆ ವೇಳೆ ತಮ್ಮ ಜಮೀನಿನತ್ತ ತೆರಳಿದ್ದರು. ಈ ಸಂದರ್ಭ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ದಾಳಿ ನಡೆಸಿ, ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ವೀರಪ್ಪರ ದೇಹ ಸಂಪೂರ್ಣ ಸುಟ್ಟು ಹೋಗಿದೆ. ಈ ಕೊಲೆ ಕೃತ್ಯ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...