Please assign a menu to the primary menu location under menu

CrimeNEWSಸಂಸ್ಕೃತಿ

ರಾತ್ರಿಯಿಡೀ ನಿದ್ದೆ ಇಲ್ಲ, ಚಿಂತಾಕ್ರಾಂತರಾದ ಮುರುಘಾ ಶ್ರೀ : ಎದೆ ನೋವು ಕಾಣಿಸಿಕೊಂಡು ಜಿಲ್ಲಾಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಡಿ ಬಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮುರುಘಾ ಶ್ರೀಗಳಿಗೆ ಬಿಪಿ ಹಾಗೂ ಸ್ಯಾಚುರೇಷನ್ ವ್ಯತ್ಯಾಸವಾಗಿರುವುದಾಗಿ ತಿಳಿದು ಬಂದಿದೆ. ವೈದ್ಯರು ಮೇಲಿಂದ ಮೇಲೆ ಇಸಿಜಿ ಹಾಗೂ ಎಕೋ ಪರೀಕ್ಷೆ ಮಾಡುತ್ತಿದ್ದಾರೆ. ಶರಣರು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಆಸ್ಪತ್ರೆಯತ್ತ ಜನರ ದಂಡು ದಾವಿಸುತ್ತಿದೆ. ತಂಡೋಪತಂಡವಾಗಿ ಹರಿದು ಬರುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆಸ್ಪತ್ರೆಯೆಡೆಗೆ ಭಕ್ತಾದಿಗಳ ದಂಡು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ವೈದ್ಯರು ಈ ಮೊದಲೇ ಮುರುಘಾ ಶ್ರೀಗಳಿಗೆ ಎದೆನೋವು ಬಂದರೆ ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸೂಚನೆ ನೀಡಿದ್ದರು. ಇಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಪೊಲೀಸರು ಶ್ರೀಗಳನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.

ರಾತ್ರಿಯಿಡೀ ನಿದ್ದೆ ಇಲ್ಲದೇ, ಚಿಂತಾಕ್ರಾಂತರಾಗಿದ್ದರು: ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳು ರಾತ್ರಿಯಿಡೀ ನಿದ್ರೆ ಇಲ್ಲದೇ ಜೈಲಿನಲ್ಲಿ ಕಳೆದರು. ಗುರುವಾರ ರಾತ್ರಿ ಶ್ರೀಗಳು ನ್ಯಾಯಾಂಗ ಬಂಧನಕ್ಕೊಳಗಾದರು. ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆ ತಡರಾತ್ರಿ ಜೈಲಿಗೆ ಸೇರಿದರು.

ಇದೀಗ ತಡರಾತ್ರಿಯಿಂದ ಜೈಲಿನಲ್ಲಿರುವ ಶ್ರೀಗಳು ರಾತ್ರಿಯಿಡೀ ನಿದ್ದೆ ಇಲ್ಲದೇ, ಚಿಂತಾಕ್ರಾಂತರಾಗಿದ್ದರು. ಬೆಳಗ್ಗೆಯಾದ ಕೂಡಲೇ ವಿಶ್ರಾಂತಿ ಮುಗಿಸಿ ಎದ್ದು, ನಂತರ ಧ್ಯಾನದಲ್ಲಿ ಸ್ವಾಮೀಜಿ ನಿರತರಾಗಿದ್ದರು. ಬಳಿಕ ಇತರ ಕೈದಿಗಳಿಗೆ ನೀಡುವಂತೆ ಜೈಲು ಸಿಬ್ಬಂದಿ ಶ್ರೀಗಳಿಗೂ ಸಹ ಚಹಾ ನೀಡಿದರು.

ತಡರಾತ್ರಿ 2.50ರ ಸುಮಾರಿಗೆ ಬಂಧಿತರಾದ ಶ್ರೀಗಳು ಬೆಳಗ್ಗೆ 6 ಗಂಟೆಗೆ ಎದ್ದರು. ನಂತರ ಮುರುಘಾಶ್ರೀಗೆ ಮೆಡಿಸಿನ್ ಮತ್ತು ಟೂತ್ ಪೇಸ್ಟ್, ಬ್ರಶ್ ಅನ್ನು ವಕೀಲರು ನೀಡಿ ಬಂದರು. ಈ ಹಿಂದೆ ಕಾರಾಗೃಹದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದ್ದ ಮುರುಘಾಶ್ರೀ ಮಧ್ಯರಾತ್ರಿಯೇ ಬಂಧಿಯಾಗಿರುವ ವಿಚಾರ ತಿಳಿದು ಕಾರಾಗೃಹ ಸಿಬ್ಬಂದಿಯೇ ಶಾಕ್ ಆಗಿದ್ದಾರೆ.

ನ್ಯಾಯಾಂಗ ಬಂಧನ: ಗುರುವಾರ ತಡರಾತ್ರಿ ಮಠದಿಂದ ಕಾವಿ ಕಳಚಿ ಬಿಳಿ ವಸ್ತ್ರ ಧರಿಸಿ ಶ್ರೀಗಳು ಹೊರಬಂದಿದ್ದರು. ನಂತರ ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ನಸುಕಿನ 2.25ಕ್ಕೆ ಆಸ್ಪತ್ರೆಯಿಂದ ಹೊರಟ ಪೊಲೀಸರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಶರಣರ ಪರ ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿ, ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

Leave a Reply

error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ