ಮಂಗಳೂರು: ಪ್ರೌಢಶಾಲೆ ವಿದ್ಯಾ ರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎಸದುರಿಸುತ್ತಿರುವ ಮುರುಘಾ ಮಠದ ಶರಣರನ್ನು ಈಗಾಗಲೇ ಬಂಧಿಸಲಾಗಿದ್ದು, ಪ್ರಕರಣ ಸಂಬಂಧ ಪೊಲಿಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮರುಘಾ ಶರಣರ ಬಂಧನ ವಿಳಂಬವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ ಎಂದು ಮಾಧ್ಯಮದವರು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಈಮಾತುಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಕಾನೂನು ಪ್ರಕಾರವೇ ಎಲ್ಲವೂ ನಡೆಯುತ್ತದೆ. ತನಿಖಾಧಿಕಾರಿಗಳಿಗೆಮುಕ್ತ ಸ್ವಾತಂತ್ರ್ಯ ನೀಡಿದ್ದೇ ವೆ. ಆ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಹೀಗಾಗಿ ಈ (ತನಿಖೆ ಪ್ರಗತಿಯಲ್ಲಿರುವ) ಸಂದರ್ಭದಲ್ಲಿ ಮಾತನಾಡುವುದೂ ಸರಿಯಲ್ಲ ಎಂದರು.
ಬೆಂಗಳೂರಿನಲ್ಲಿ ಆರ್. ಅಶೋಕ್ ಮಾತನಾಡಿ, ಮಠಗಳ ಬಗ್ಗೆ ಗೌರವ ಇರುತ್ತೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ. ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತೆ. ಇದರಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ. ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನ ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಮಾತನಾಡಿದ ಬೊಮ್ಮಾಯಿ, ಬಹಳ ದಿನಗಳ ಬಳಿಕ ಪ್ರಧಾನಿ ಅವರು ರಾಜ್ಯದ ಕರಾವಳಿ ಪ್ರದೇಶಕ್ಕೆ ಬರುತ್ತಿದ್ದಾರೆ. 3800 ಕೋಟಿ ರೂ. ಮೊತ್ತದ ಹಲವು ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಬಿಜೆಪಿಯ ‘ಜನೋತ್ಸ ವ’ ಕಾರ್ಯಕ್ರಮವು ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು ಸೆ.8ಕ್ಕೆ ದಿನನಿಗದಿಯಾಗಿದೆ. ಪಕ್ಷದ ರಾಷ್ಟ್ರೀ ಯ ಅಧ್ಯಕ್ಷರಾಗಿರುವ ಜೆ.ಪಿ.ನಡ್ಡಾ ಅವರು ಪಾಲ್ಗೊಳ್ಳಲಿದ್ದಾರೆ ಎಂದು
ಹೇಳಿದ್ದಾರೆ.