NEWSಕೃಷಿನಮ್ಮಜಿಲ್ಲೆ

ಫೆ.28ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಕಬ್ಬು ಬೆಳೆಗಾರ ಸಾವಿರಾರು ರೈತರ ಮುತ್ತಿಗೆ: ಕುರುಬೂರು ಶಾಂತಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಬ್ಬು ಹೆಚ್ಚುವರಿ ದರ 150 ರೂ. ಪಾವತಿಯಾಗದಿದ್ದರೆ ಇದೇ ಫೆ. 28ರಂದು ಸಾವಿರಾರು ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ಕಬ್ಬು ಬೆಳೆಗಾರರ ಸಂಘದಿಂದ ಕುವೆಂಪು ಪಾರ್ಕಿನಲ್ಲಿ ಮಂಗಳವಾರ ಆಯೋಜಿಸಿದ್ದ ಮೈಸೂರಿನ ಜಿಲ್ಲಾ ಮಟ್ಟದ ರೈತರ ಸಭೆಯಲ್ಲಿ ಈ  ತೀರ್ಮಾನ ಕೈಗೂಳ್ಳಲಾಗಿದೆ ಎಂದು ಅವರು ವಿವರಿಸಿದರು.

ರಾಜ್ಯ ಸರ್ಕಾರ ಎಪ್ ಆರ್ ಪಿ ಹೆಚ್ಚುವರಿ ದರ 150 ರೂ.ಗಳನ್ನು ಏರಿಕೆ ಮಾಡಿ ಎರಡು ತಿಂಗಳಾದರೂ ಕಾರ್ಖಾನೆ ಮಾಲೀಕರು ರೈತರಿಗೆ ಹಣ ಪಾವತಿ ಮಾಡದೆ ಇರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಆದ್ದರಿಂದ ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಫೆ.28ರಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ  ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾ ಸಮಿತಿ ತೀರ್ಮಾನಿಸಿದೆ ಎಂದು ಎಚ್ಚರಿಕೆ ನೀಡಿದರು.

ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ರೈತರಿಗೆ ಪೂರಕವಾದ ರಸಗೊಬ್ಬರಗಳು ದೊರೆಯುತ್ತಿಲ್ಲ. ಇದೆಲ್ಲ ಗೊತ್ತಿದ್ದರೂ ಸಹ ಕೃಷಿ ಇಲಾಖೆ ಕಣ್ಣು ಮುಚ್ಚಿ ಕುಳಿತಿರುವುದು ರೈತರಿಗೆ ತೊಂದರೆ ಆಗುತ್ತಿದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ಭತ್ತ ಖರೀದಿ ಕೇಂದ್ರದಲ್ಲಿ ಒಂದು ಕ್ವಿಂಟಲ್‌ಗೆ, 500ಗ್ರಾಂ ಮಾತ್ರ ಕಡಿತ ಮಾಡಲು ಆದೇಶವಿದೆ. ಆದರೆ  4ರಿಂದ 5 ಕೆಜಿ ಕಡಿತ ಮಾಡುತ್ತಿದ್ದು ಈ ಮೂಲಕ ರೈತರಿಗೆ ವಂಚನೆ ಮಾಡುತ್ತಿದ್ದಾರೆ. ಬೇಸಿಗೆ ಸಮಯ ದನಕರುಗಳಿಗೆ ಕುಡಿಯಲು ಕೆರೆಕಟ್ಟೆ ತುಂಬಿಸಲು ಕಬಿನಿ ಕಾವೇರಿ ನಾಲೆಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು.

ವಿದ್ಯುತ್ ಸಮಸ್ಯೆ : ರಾತ್ರಿ ಪಾಳಿಯಲ್ಲಿ ಫಸಲಿಗೆ ರೈತರು ನೀರು ಬಿಡಲು ಸಮಸ್ಯೆ ಆಗುತ್ತಿದ್ದು ಹಗಲು ಸಮಯವೇ ವಿದ್ಯುತ್ ನೀಡಬೇಕು, ರೈತರಿಗೆ ತೊಂದರೆ ಆಗುವುದನ್ನು ತಪ್ಪಿಸಬೇಕು. ಅಡುಗೆ ಗ್ಯಾಸ್ ವಿತರಣೆ ವೇಳೆ ಗ್ರಾಮೀಣ ಪ್ರದೇಶದಲ್ಲಿ ಡೆಲಿವರಿ ಕೊಡುವವರು 50 ರಿಂದ ರೂ.100ಗಳನ್ನು ಹೆಚ್ಚಿಗೆ ವಸೂಲಿ ಮಾಡುತ್ತಿದ್ದು ಇದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ಈ ಎಲ್ಲಾ ಸಮಸ್ಯೆಗಳ ಕುರಿತು 10 ದಿನಗಳೊಳಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮುಖಂಡರಾದ ಕುರುಬೂರು ಸಿದ್ದೇಶ್, ಹಾಡ್ಯ ರವಿ, ಕೆಂಡಗಣ್ಣ ಸ್ವಾಮಿ, ಬಿ.ಪಿ. ಪರಶಿವಮೂರ್ತಿ, ಕುರುಬೂರು ಮಂಜು, ಹಂಪಾಪುರ ರಾಜೇಶ್, ಹೆಗ್ಗೂರು ರಂಗರಾಜ್, ಕಮಲಮ್ಮ, ಪುಷ್ಪಲತಾ, ಕಾಟೂರು ಮಹದೇವಸ್ವಾಮಿ, ಪ್ರಭುಸ್ವಾಮಿ, ಬನ್ನೂರು ಶ್ರೀನಿವಾಸ, ಪುಟ್ಟೇಗೌಡನ ಹುಂಡಿ ರಾಜು, ನಾಗರಾಜು, ಪಾಳ್ಯ ಸ್ವಾಮಿ, ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ