ಕೆಎಸ್ಆರ್ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಮೈಸೂರು: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಮೇ 10ರ ಸಂಜೆ 4 ಗಂಟೆಗೆ ಅರಮನೆ ಆವರಣದಲ್ಲಿ ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಸಿವಿಲ್ ಡಿಫೆನ್ಸ್ ಮಾಕ್ ಡ್ರಿಲ್ ಕುರಿತು ನಿನ್ನೆ ಮೇ 8ರಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೇ 10 ರಂದು ಸಿವಿಲ್ ಡಿಫೆನ್ಸ್ ಮಾಕ್ಡ್ರಿಲ್ ಅರಮನೆ ಆವರಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಮಾಕ್ಡ್ರಿಲ್ಗೆ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಮಾಕ್ ಡ್ರಿಲ್ ವ್ಯವಸ್ಥಿತವಾಗಿ ಮಾಡಬೇಕು. ಇದಕ್ಕೆ ಅಗತ್ಯವಾದ ಮಾನವ ಸಂಪನ್ಮೂಲವನ್ನು ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಅರಮನೆ ಆವರಣದಲ್ಲಿ ಮಾಕ್ಡ್ರಿಲ್ ಮಾಡಲು ಸೂಕ್ತವಾದ ಸ್ಥಳವನ್ನು ಗುರುತಿಸಿಕೊಂಡು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಿ, ಕಂಟ್ರೋಲ್ ರೂಂ, ಫೈರ್ ಇಂಜಿನ್, ಆಂಬುಲೆನ್ಸ್, ಹಾಸ್ಪಿಟಲ್ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಇರಬೇಕು. ಮಾಕ್ಡ್ರಿಲ್ ವ್ಯವಸ್ಥಿತವಾಗಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ನೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು, ಡಿ ಸಿ.ಪಿ. ಮುತ್ತುರಾಜ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Related
