NEWSನಮ್ಮರಾಜ್ಯಮೈಸೂರುಸಂಸ್ಕೃತಿ

ನಾಳೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಳೆ (ಸೆ.22) ಉದ್ಘಾಟನೆಯಾಗಲಿದ್ದು, ನಾಡಹಬ್ಬ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ ಆರಂಭವಾಗಿದೆ.

ಈಗಾಗಲೇ ಚಾಮುಂಡೇಶ್ವರಿ ಉತ್ಸವ ಮೂರ್ತಿ ಶುಚಿಗೊಳಿಸಿ ಸಿದ್ಧತೆ ಮಾಡಿಕೊಂಡ ಅರ್ಚಕರು, ಹಸಿರು ಸೀರೆಯುಡಿಸಿ ತಯಾರಿ ಮಾಡಿಕೊಂಡಿದ್ದಾರೆ.

ನಾಳೆ ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾಕೈಂಕರ್ಯಗಳು ನೆರವೇರಿದ ಬಳಿಕ ಬೆಳ್ಳಿರಥಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ ವೇದಿಕೆಗೆ ತಂದು ಪುಷ್ಪಾರ್ಚನೆ ನಡೆಸಲಾಗುತ್ತದೆ.

ಇನ್ನು ನಾಳೆ ಸೋಮವಾರ ಬೆಳಗ್ಗೆ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ಉತ್ಸವ ಮೂರ್ತಿಗೆ ಲೇಖಕಿ ಬಾನುಮುಷ್ತಾಕ್ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ.

ಇನ್ನು ಚಾಮುಂಡೇಶ್ವರಿ ದೇವಾಲಯ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, 1 ಸಾವಿರ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ಹಿನ್ನೆಲೆ ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದ್ದು, ವಿವಿಐಪಿ, ವಿಐಪಿ ಹಾಗೂ ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

ಇತ್ತ ದಸರಾ ಉದ್ಘಾಟನೆ ಮುಗಿಯುವವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದ್ದು, ಆಹ್ವಾನಿತರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗಿದೆ. ಕಾರ್ಯಕ್ರಮದಲ್ಲಿ ದಸರಾ ಉದ್ಘಾಟಕಿ ಬಾನುಮುಷ್ತಾಕ್, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Megha
the authorMegha

Leave a Reply

error: Content is protected !!
Latest news
ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ... KSRTC: ಸರ್ಕಾರದ ಸಾಧನ ಸಮಾವೇಶದಲ್ಲಿ ಕಪ್ಪು ಬಾವುಟ, ಕಪ್ಪು ಪಟ್ಟಿ ಧರಿಸಿ ಸಾರಿಗೆ ನೌಕರರ ಪ್ರತಿಭಟನೆ !? BMTC ನೌಕರರಿಗೆ ಮೇ 19ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ್ರಮ- ಎಂಡಿ ಆದೇಶಕ್ಕೂ ಕಿಮ್ಮತ್ತಿಲ್ಲದರ ಪರಿಣಾಮ ಈ ವಿಳಂಬ!