ತಿ.ನರಸೀಪುರ: ತಾಲೂಕಿನ ಮೂಗೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜಯದ ನಗೆ ಬೀರಿದ್ದಾರೆ.
ಮೂಗೂರು ಕೆಪಿಎಸ್ ಶಾಲಾ ಆವರಣದಲ್ಲಿ ಇಂದು ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಒಟ್ಟು ಮೈಸೂರು ಜಿಲ್ಲೆಯ ಒಟ್ಟು ಒಂಬತ್ತು ತಾಲೂಕಿನ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಭಾಗವಹಿಸಿದ್ದವು.
ಈ ವೇಳೆ ಬಾಲಕರ ವಿಭಾಗದ ಪಂದ್ಯಾವಳಿಯಲ್ಲಿ ತಿ.ನರಸೀಪುರ ತಾಲೂಕಿನ ಮೂಗೂರು ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳು ಪ್ರತಿನಿಧಿಸಿದ್ದು ಫೈನಲ್ ನಲ್ಲಿ ಮೈಸೂರು ದಕ್ಷಿಣ ತಾಲೂಕು ತಂಡವನ್ನು 2-0 ಅಂತರದಲ್ಲಿ ಸೋಲಿಸಿ, ವಿಜಯದ ನಗೆ ಬೀರಿದರು.
ಈ ಪಂದ್ಯದಲ್ಲಿ ವಿದ್ಯಾರ್ಥಿಗಳಾದ ನಂದನ್, ಗೌತಮ, ನಿತಿನ್ ಕುಮಾರ್, ಸಚಿನ್, ಹರ್ಷ, ಮಹೇಶ್ ಕುಮಾರ್, ಸಂತೋಷ್ ಕುಮಾರ್ ಮಹೇಶ, ಮನು ತಂಡವನ್ನು ಪ್ರತಿನಿಧಿಸಿದ್ದರು.
ಈ ವೇಳೆ ಮಾತನಾಡಿದ ಶಾಲೆಯ ಪ್ರಾಂಶುಪಾಲೆ ರಾಜೇಶ್ವರಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಈಗ ಸರಕಾರದಿಂದ ಕ್ರೀಡೆಗೆ ಸಾಕಷ್ಟು ಉತ್ತೇಜನ ಸಿಗುತ್ತಿದೆ. ಸಂಘ, ಸಂಸ್ಥೆಗಳು ಆಸಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುತ್ತಿವೆ. ಇಂದಿನ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಕಷ್ಟು ಅವಕಾಶ ಲಭಿಸುತ್ತಿದೆ. ಇದನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಲು ಯತ್ನಿಸಬೇಕು ಎಂದರು.
ಇನ್ನು ತಮ್ಮ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಂದ್ಯ ಎಂದ ಮೇಲೆ ಸೋಲು ಗೆಲುವು ಇದ್ದೆ ಇರುತ್ತದೆ. ಆದರೆ ಅವೆರಡನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಥ್ರೋಬಾಲ್‌ನಲ್ಲಿ ತಮ್ಮ ಶಾಲಾ ಮಕ್ಕಳು ಗೆದ್ದಿರುವುದಕ್ಕೆ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಹನುಮಂತಪ್ಪ ತಳವಾರ್, ದೈಹಿಕ ಶಿಕ್ಷಣ ಶಿಕ್ಷಕ ಮಲ್ಲೇಶ್, ಎಸ್‌ಡಿಎಂಸಿ ಉಪಾಧ್ಯಕ್ಷ ಸಿದ್ದರಾಜು, ಶಿಕ್ಷಕರಾದ ದೇವರಾಜು, ಕೇಶವ್, ಕಾವೇರಿ, ವೀಣಾ, ವನಜಾ, ರಮೇಶ್, ಆನಂದ, ಮಹಾದೇವ್, ರಂಜಿತಾ ಅವರು ಅಭಿನಂದಿಸಿದರು.