ಮೈಸೂರು: ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಕಾರ್ಡ್ ವಿತರಣೆ: ಆಹಾರ ಸಚಿವ ಕೆಎಚ್ಎಂ

ಮೈಸೂರು: ಪಡಿತರ ಕಾರ್ಡ್‌ಗಳ ಪರಿಷ್ಕರಣೆ ನಡೆಸಲಾಗಿತ್ತಿದ್ದು ಅರ್ಹರು ಒಂದು ವೇಳೆ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಯಾಗಿದ್ದರೆ ಸಂಬಂಧಿಸಿದ ತಾಲೂಕಿನ ತಹಸೀಲ್ದಾರರರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದಾಗ ಅವರು ಪರಿಶೀಲನೆ ನಡೆಸಿ ಪುನಃ ಕಾರ್ಡ್ ವಿತರಿಸಲು ಕ್ರಮವಹಿಸಲಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ನಗರದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ಆಯೋಜಿಸಿರುವ ಆಹಾರ ಮಳಿಗೆಯ ವಸ್ತುಪ್ರದರ್ಶನ ಮಳಿಗೆಯನ್ನು ಇಂದು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಕುರಿತು ವಸ್ತು ಪ್ರರ್ದಶನದಲ್ಲಿ ಹಳ್ಳಿಯ ಜೀವನಶೈಲಿಯ ಕುರಿತ ಪ್ರದರ್ಶನ ಮಾಡಲಾಗಿದ್ದು ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿಯ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ವಸ್ತು ಪ್ರದರ್ಶನ ಮಾಡಲಾಗಿದೆ. ಇದು ಹಸಿವು ಮುಕ್ತ ಕರ್ನಾಟಕ ಸಂಕಲ್ಪದೊಂದಿಗೆ ಸಮೃದ್ದ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಮಾತನಾಡಿ ಅವರು, ಸರ್ಕಾರ ಸುಭದ್ರವಾಗಿದ್ದು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯ ಮಂತ್ರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದ ಅವರು, ಸಚಿವ ಸಂಪುಟದ ಪುನರ್ ರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತಿದ್ದು ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮವಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಡಾ.ಎಚ್.ನಟರಾಜ್, ಜಿಲ್ಲಾ ಜೆಂಟಿ ಉಪ ನಿರ್ದೇಶಕ ಮಂಟೇಸ್ವಾಮಿ ಹಾಗೂ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Related








