Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳಿಗೆ ಹೊಸ ಹೆಸರು “ಬಿಜೆಪಿ ಜನಸ್ಪಂದನ ರಸ್ತೆಗಳು”

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಗರದ ಗುಂಡಿ ಬಿದ್ದಿರುವ ರಸ್ತೆಗಳಿಗೆ ಬಿಜೆಪಿ ಜನಸ್ಪಂದನ ರಸ್ತೆ’ ಎಂದು ಮರು ನಾಮಕರಣ ಮಾಡುವ ಮೂಲಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ರಾಜ್ಯ ಅತಿ ಹಿ೦ದುಳಿದ ವರ್ಗಗಳ ಜಾಗೃತಿ ವೇದಿಕೆ ಪದಾಧಿಕಾರಿಗಳು ಮೈಸೂರಿನ ಸಿದ್ದಪ್ಪ ಚೌಕದ ಗುಂಡಿ ಬಳಿ ಪ್ರತಿಭಟನೆ ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪ್ರಧಾನಿ ಮೋದಿ ಅವರ ಜನ್ಮ ದಿನದ ಅ೦ಗವಾಗಿ ಶನಿವಾರ ಬಿಜೆಪಿ ಜನಸ್ಪಂದನ ರಸ್ತೆ ಎಂದು ಘೊಷಣೆ ಕೂಗುತ್ತ ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು.

ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದು ವರ್ಷಗಳೇ ಕಳೆದರೂ ನಗರ ಪಾಲಿಕೆ ಸರಿಪಡಿಸಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಮೂರುವರೆ ವರ್ಷಗಳ ಆಡಳಿತದಲ್ಲಿ ಮೈಸೂರು ನಗರದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಹಲವಾರು ಅಪಘಾತಗಳು ಸಂಭವಿಸಿವೆ. ಇದರಿಂದ ಬಿಜೆಪಿಗೆ ಮತ ನೀಡಿದ ಮತದಾರ ಈಗ ಪರಿತಪಿಸುವಂತಾಗಿದೆ ಎಂದು ಕಿಡಿಕಾರಿದರು.

ದಸರಾ ಮಹೋತ್ಸವದ ಸಂದರ್ಭದಲ್ಲಿ ರಸ್ತೆಗಳು ಹದಗೆಟ್ಟಿವೆ ಆದರೂ ಸರಿಪಡಿಸುವ ಗೋಜಿಗೆ ಇನ್ನು ಹೋಗಿಲ್ಲ ಈಗಲಾದರೂ ಅವುಗಳನ್ನು ಮಾಡಿ ಎಂದು ಒತ್ತಾಯಿಸಿದರು.

ದೇಶ, ವಿದೇಶದಿಂದ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ. ಆದರೆ ಬಿಜೆಪಿ ಸರ್ಕಾರದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೈಸೂರಿನ ಘನತೆಗೆ ಕುಂದು ಉಂಟಾಗುವ ಸಂದರ್ಭ ಬ೦ದೊದಗಿದೆ. ಅಲ್ಲದೆ, ರಾಷ್ಟ್ರಪತಿಗಳು ಸಹ ಈ ಬಾರಿಯ ದಸರಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ, ನಗರದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು, ರಾಜ್ಯ ಅತಿಹಿ೦ದುಳಿದವರ್ಗಗಳ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗಭೂಷಣ್‌, ಮುಖಂಡರಾದ ನಾಗೇಶ್, ಯೋಗೇಶ್ ಉಪ್ಪಾರ್, ಮಹೇಂದ್ರ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ