NEWSಸಂಸ್ಕೃತಿ

ಮೈಸೂರು: ರಾಮಸ್ವಾಮಿ ಅವರ 75ನೇ ಹುತಾತ್ಮ ದಿನ ಆಚರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ಸಂಸ್ಥಾನದ ವಿರುದ್ಧ ಸ್ವಾತಂತ್ರಕ್ಕಾಗಿ ಹೋರಾಡಿ ಪ್ರಾಣಬಿಟ್ಟ ರಾಮಸ್ವಾಮಿ ಅವರ 75ನೇ ಹುತಾತ್ಮ ದಿನವನ್ನು ವಿವಿಧ ಸಂಘಟನೆಗಳು ಮಂಗಳವಾರ ಆಚರಿಸಿದವು.

ಯುವ ಭಾರತ್ ಸಂಘಟನೆ ನಗರದ ರಾಮಸ್ವಾಮಿ ವೃತ್ತದಲ್ಲಿ ಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣ್ಯರು ರಾಮಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಶಾಸಕ ಎಲ್.ನಾಗೇಂದ್ರ ಮಾತನಾಡಿ, ರಾಮಸ್ವಾಮಿ ವೃತ್ತ ಮೈಸೂರಿನಲ್ಲಿ ಜನಪ್ರಿಯವಾಗಿದ್ದು, ಅದರ ಇತಿಹಾಸವನ್ನು ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಪ್ರಜಾಪ್ರಜಾಪ್ರಭುತ್ವದ ಸ್ವಾತಂತ್ರ್ಯಕ್ಕೆ ಮಡಿದ ರಾಮಸ್ವಾಮಿ ಅವರ ಮಾಹಿತಿಯ ನಾಮಫಲಕವನ್ನು ವೃತ್ತದ 5 ರಸ್ತೆಯ ಬದಿಗಳಲ್ಲಿ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದರು.

ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಜೋಗಿ ಮಂಜು, ಎಂಡಿಎ ಸದಸ್ಯ ನವೀನ್‌ಕುಮಾರ್, ಯುವ ಭಾರತ್ ಸಂಘಟನೆ ಸಂಚಾಲಕ ಅಜಯ್ ಶಾಸ್ತ್ರಿ, ವೀರ ಸಾವರ್ಕರ್ ಸಂಘದ ಅಧ್ಯಕ್ಷ ರಾಕೇಶ್ ಭಟ್, ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಪಡುವಾರಹಳ್ಳಿ ಎಂ.ರಾಮಕೃಷ್ಣ, ಮುಖಂಡರಾದ ವಿಜಯ್‌ಕುಮಾರ್, ನವೀನ್, ರವಿಶಾಸ್ತ್ರಿ, ರಂಗನಾಥ್ ಇದ್ದರು.

ಎಐಡಿಎಸ್ ಸಂಘಟನೆ ನೇತೃತ್ವದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ರಾಮಸ್ವಾಮಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಎಐಡಿಎಸ್‌ ಜಿಲ್ಲಾಧ್ಯಕ್ಷ ಬಿ.ಜೆ. ಸುಭಾಷ್, ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಕಲಾ, ಆಸಿಯಾ ಬೇಗಂ ಮತ್ತಿತರರು ಇದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...