ಮೈಸೂರು: ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭರವಸೆ

ಮೈಸೂರು: ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ನಗರದ ಪರಿಸ್ಥಿತಿ ಸುಧಾರಿಸಲು ವಾರ್ಡ್‌ರ ಕ್ರಮ ಕೈಗೊಳ್ಳಲಾಗುತ್ತಿದೆ ನಗರದ ವಾರ್ಡ್ ಸಂಖ್ಯೆ 25ರ ತಿಲಕ್‌ನಗರದಲ್ಲಿ ಸಮಸ್ಯೆಗಳ ಬಗ್ಗೆ, ನಾಗರಿಕರು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಕುಡಿಯುವ ನೀರು, ಮೂಲ ಸೌಕರ್ಯ, ಸಾರ್ವಜನಿಕ ಸುರಕ್ಷತೆ ಹಾಗೂ ದನಗಳ ಸಮಸ್ಯೆ ಬಗ್ಗೆ ವಿವರಿಸಿದ್ದಾರೆ ಈ ನಿಟ್ಟಿನಲ್ಲಿ ತಿಲಕನಗರ ವಾರ್ಡ್‌ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗಾಗಲೇ ನಗರಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದರು.
ಈ ವಾರ್ಡ್ನಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಇದೆ ಇದಕ್ಕೆ ತಕ್ಷಣದ ಪರಿಹಾರವಾಗಿ ವಾಣಿವಿಲಾಸ ವಾಟರ್ ವರ್ಕ್ಸ್ನಿಂದ ತಿಲಕನಗರ ಓವರ್‌ಹೆಡ್ ಟ್ಯಾಂಕ್‌ಗೆ ನೀರಿನ ಪೈಪ್‌ಲೇನ್ ಅನ್ನು ಸಂಪರ್ಕಿಸುವುದು ಮತ್ತು ಈ ಪ್ರದೇಶಕ್ಕೆ ಸಮರ್ಪಕ ಮತ್ತು ನಿಯಮಿತ ನೀರು ಸರಬರಾಜು ಖಚಿತವಡಿಸಿ ಕೊಳ್ಳಲು ಎಸ್‌ಎಫ್‌ಸಿ ಅನುದಾನವನ್ನು ಬಳಸಿಕೊಂಡು 10 ಲಕ್ಷ ಲೀಟರ್ ಸಾಮರ್ಥ್ಯದ ಸಂಪ್ ನಿರ್ಮಾಣಕ ಕ್ರಮ ಕೈಗೊಳ್ಳಲು ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಸಮುದಾಯ ಭವನ: ತಿಲಕ್ ನಗರದಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ ಬೇಡಿಕೆ ಇತ್ತು ಸಾರ್ವಜನಿಕ ಸಭೆಗಳು, ಸಾಮಾಜಿಕ ಕಾರ್ಯಗಳು ಮತ್ತು ಕಲ್ಯಾಣ ಚಟುವಟಿಕೆಗಳಿಗೆ ಅವಶ್ಯಕವಾಗಿದೆ. ಈ ಕೆಲಸವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಸಾರ್ವಜನಿಕ ಸುರಕ್ಷತೆ ಮತ್ತು ಅಗತ್ಯ ನಾಗರಿಕ ಸೌಲಭ್ಯಗಳನ್ನು ಒದಗಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬಿಡಾಡಿ ದನಗಳ ಸಮಸ್ಯೆಗೆ ಪರಿಹಾರ: ಈ ವಾರ್ಡನಲ್ಲಿ ಮಾಲೀಕರು ತಮ್ಮ ಹಸುಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಮುಕ್ತವಾಗಿ ಬಿಡುತ್ತಿದ್ದಾರೆ ಇದರಿಂದ ಪಾದಚಾರಿಗಳು ಮತ್ತು ವಾಹನ ಸವಾರರಿಗೆ ಸಂಚಾರಕ್ಕೆ, ಅಡ್ಡಿ ಉಂಟಾಗುತ್ತಿದೆ ಹೀಗಾಗಿ ರಸ್ತೆಯಲ್ಲಿ ದನಗಳನ್ನು ಬಿಡುವವರಿಗೆ ದಂಡ ಮಿಸಲು ಹಾಗೂ ಕಠಿಣ ಕ್ರಮ ಜರುಗಿಸಲು ಆಯುಕ್ತರಿಗೆ ಆದೇಶಿಸಲಾಗಿದೆ. ಇಡೀ ನಗರದಲ್ಲಿ ಯಾವುದೇ ಸಮಸ್ಯೆ ಇದ್ದರೂ ನಾಗರಿಕರು ಅಹವಾಲು ಮೂಲಕ ತಿಳಿಸಬಹುದು. ಅದನ್ನು ಶೀಘ್ರವಾಗಿ ಬಗೆಹರಿಸಲು ಬದ್ಧವಾಗಿದ್ದೇನೆ ಎಂದು ಭರವಸೆ ನೀಡಿದರು.
Related









