ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಹಳೇಹೆಗ್ಗುಡಿಲು ಬೆಟ್ಟದಲ್ಲಿ ಇಂದು ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿ ಸುತ್ತಮುತ್ತಲ ಗ್ರಾಮಗಳ ಜನತೆಯಲ್ಲಿ ಭಯಭೀತಿಯುಂಟು ಮಾಡಿವೆ.

ಕಾಡಂಚಿನ ಗ್ರಾಮವಾದ ಹಳೇಹೆಗ್ಗುಡಿಲು ಗ್ರಾಮದ ಬಳಿಯಿರುವ ಬೆಟ್ಟವೊಂದರಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು ಹುಲಿಗಳ ಚಲನವಲನದ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು ಜಮೀನಿಗೆ ತೆರಳುವುದು ಹೇಗೆ ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ.
ಹೀಗಾಗಿ ಹುಲಿಗಳಿಂದ ಹೆಚ್ಚಿನ ಅನಾಹುತ ಆಗುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟು ಈ ಎರಡೂ ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಅಕ್ಕಪಕ್ಕದ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹುಲಿಗಳು ಆಹಾರ ಸಿಗದೆ ನಾಡಿನತ್ತ ಬರುತ್ತಿದ್ದು, ಈ ಬಗ್ಗೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಕಾಡು ಪ್ರಾಣಿಗಳಿಗೆ ಸರಿಯಾಗಿ ಆಹಾರ ಸಿಗುವಂತ ವ್ಯವಸ್ಥೆ ಮಾಡಬೇಕು ಎಂದು ಪ್ರಜ್ಞಾವಂತ ಜನರು ಆಗ್ರಹಿಸಿದ್ದಾರೆ.
Related


Megha








