NEWSರಾಜಕೀಯ

ಮೈಸೂರು: ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ – ಎಚ್.ವಿಶ್ವನಾಥ್

ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ - ಸೇವೆಯೇ ಇಲ್ಲದೆ ಟೋಲ್ ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚರ್ಚೆ ಇಲ್ಲದೆ ಕಾಯ್ದೆಗಳು ಪಾಸ್ ಆಗುತ್ತವೆ, ಸೇವೆಯೇ ಇಲ್ಲದೆ ಟೋಲ್ ಸಂಗ್ರಹ ಮಾಡ್ತೀರಾ ಏ ಮೋದಿ ಏನಪ್ಪಾ ನಿಂದು ಅಂಧ ದರ್ಬಾರ್ ಎಂದು ಬಿಜೆಪಿ ಪರಿಷತ್ ಸದಸ್ಯ ಎಚ್.ವಿಶ್ವನಾಥ್‌ ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೈಸೂರು -ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಟೋಲ್ ದರ ಸಂಗ್ರಹ ವಿರುದ್ಧ ಮೈಸೂರಿನ ಮಣಿಪಾಲ್ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಹಿನ್ನೆಲೆ 2600 ಎಕರೆ ರೈತರ ಜಮೀನು ಹೋಯ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಭೂಮಿ ಕಳೆದುಕೊಂಡ ಮಂಡ್ಯ ಭಾಗದ ನೂರಾರು ಕುಟುಂಬಗಳು‌ ಬೀದಿಗೆ ಬಂದಿವೆ. ಇತ್ತ ಜನ ವಿರೋಧಿ ಯೋಜನೆ ಮಾಡಿ ಟೋಲ್ ಸಂಗ್ರಹ ನೆಪದಲ್ಲಿ ಹಗಲು ದರೋಡೆಗೆಳಿದಿದ್ದೀರಿ ರಸ್ತೆ ಬೇಕು ಅಂಥಾ ಯಾರು ಕೇಳಿದ್ರು ಎಂದು ಪ್ರಶ್ನಿಸಿದ ಅವರು, ನಾಲ್ಕು ಪಥನೇ ಸಾಕಾಗಿತ್ತು. ಹತ್ತು ಪಥದ ರಸ್ತೆ ಮಾಡಿದ್ದೀರಾ ಆದರೆ ಬಡವರು ಓಡಾಡುವ ಸರ್ವಿಸ್ ರಸ್ತೆ ಎಲ್ಲಿದೆ, ಅಪಘಾತವಾದರೆ ಚಿಕಿತ್ಸೆ ನೀಡಲು ಟ್ರಾಮಾ ಸೆಂಟರ್ ಎಲ್ಲಿದೆ ಎಂದು ಪ್ರಶ್ನಿಸಿದರು.

ಬೆಂಗಳೂರು ಮೈಸೂರು ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ವಿಶ್ವನಾಥ್, ಪ್ರತಾಪ ಸಿಂಹ ಮಿನಿ ಕಂಟ್ರ್ಯಾಕ್ಟರ್. ನಿನ್ನ ಕೆಲಸ  ಹೆದ್ದಾರಿ ವಿಚಾರದಲ್ಲಿ ನೀನು ಮಾಡಿದ್ದೇನು? ರಸ್ತೆಗೆ ಮೆಟಿರೀಯಲ್ ಸಪ್ಲೈ ಮಾಡಿದ್ದು ಎಲ್ಲರಿಗೂ ಗೊತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಇನ್ನು ದಿನ ಬೆಳಗಾದರೆ ಹೈವೇ ಫೇಸ್ ಬುಕ್ ಲೈವ್ ಮಾಡುತ್ತಿದ್ದೀಯಾ, ಅದನ್ನು ಬಿಟ್ಟು ಜನರ ಆರೋಗ್ಯದ ಕಡೆಯೂ ನೋಡು, ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿ ಮಕ್ಕಳು ಸಾಯುತ್ತಿದ್ದಾರೆ. ಅವರನ್ನು ನೋಡಪ್ಪ, ಅಲ್ಲಿಯೂ ಪ್ರೆಸ್‌ಮೀಟ್ ಮಾಡಪ್ಪ. ಅವನು ಯಾರೋ ಶ್ರೀಧರ್ ಅನ್ನೋ ಅಧಿಕಾರಿ ಸರ್ವಿಸ್ ರಸ್ತೆ ಮಾಡುವ ಕಾನೂನು ಎಲ್ಲಿದೆ ಅಂತಾನೆ. ಏನಪ್ಪ ಮೋದಿ ನಿಮ್ಮ ಸರ್ಕಾರದಲ್ಲಿ ಅಧಿಕಾರಿ ಶಾಹಿ ಆಡಳಿತ ನಡೆತಾ ಇದೆಯಾ ಎಂದು ಕಿಡಿಕಾರಿದರು.

ಮೈಸೂರು ಕೊಡಗು ಸಂಸದರು ಹೇಳುತ್ತಾರೆ ಎಲ್ಲವೂ ಸರಿಯಾಗಿದೆ ಎಂದು. ಸುಮ್ಮನೆ ಜನ ಗಲಾಟೆ ಮಾಡುತ್ತಾರೆ ಎಂದು. ಇದರ ಜತೆಗೆ ಪಂಥಾಹ್ವಾನ ಕೂಡ ಕೊಟ್ಟಿದ್ದಾರೆ.  ಹೀಗಾಗಿ ಒಂದು ದಿನಾಂಕ ನಿಗದಿ ಮಾಡಿ ನಾವು ಬರಲು ಸಿದ್ದವಿದ್ದೇವೆ. ರಸ್ತೆ ಸಂಪೂರ್ಣ ಕಂಪ್ಲೀಟ್ ಆದ ಮೇಲೆ  ಪ್ರಯಾಣಿಕರಿಗೆ ಮೂಲಭೂತ ಸೌಕರ್ಯಗಳನ್ನು ಕೊಟ್ಟ ಮೇಲೆ ಟೋಲ್ ದರ ನಿಗದಿಮಾಡಿ ಯಾರು ಬೇಡ ಅಂದರು ಎಂದು ವಾಗ್ದಾಳಿ ನಡೆಸಿದರು.

ಇನ್ನು ಈಗಾಗಲೇ ಕೆಎಸ್ಆರ್‌ಟಿಸಿ ಬಸ್ ದರ ಕೂಡ ಹೆಚ್ಚಿಸಿದ್ದಾರೆ. ನಮಗೆ ಗೊತ್ತಿಲ್ಲದೆ ನಮ್ಮ ಜೇಬು ಪಿಕ್ ಪ್ಯಾಕೆಟ್ ಆಗುತ್ತಿದೆ. 118 ಕಿ.ಮಿ. ಸಂಪೂರ್ಣ ಮುಗಿದ ಮೇಲೆ ಸರ್ವಿಸ್ ರಸ್ತೆ ಕಾಮಗಾರಿಯು ಮುಗಿದ ಮೇಲೆ ಎಲ್ಲ ಸೇರಿ ಒಂದು ದರ ನಿಗದಿ ಮಾಡಿದರೆ ಸರಿ. ಅದನ್ನು ಬಿಟ್ಟು ಜನ ಸಾಮಾನ್ಯರ ಮೇಲೆ ಬರೆ ಎಳೆಯುವ ಕೆಲಸ ಮಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ