NEWSಕೃಷಿನಮ್ಮಜಿಲ್ಲೆ

ಮೈಸೂರು: ರೈಲು ತಡೆಯಲು ಮುಂದಾದ ರೈತರ ವಶಕ್ಕೆ ಪಡೆದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ರೈತರ ವಿರುದ್ಧ ನಡೆದುಕೊಳ್ಳುತ್ತಿರು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಲು ರೈಲು ತಡೆ ಚಳವಳಿ ನಡೆಸುತ್ತಿದ್ದ ರೈತರನ್ನು ಮೈಸೂರಿನ ರೈಲು ನಿಲ್ದಾಣದ ಬಳಿ ಪೊಲೀಸರು ಬಂಧಿಸಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದ ಬಳಿ ಜಮಾಯಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ರೈಲುಗಳನ್ನು ತಡೆಯಲು ಮುಂದಾದ ರೈತರು ಪೊಲೀಸರು ಬಂಧಿಸಿ ಕರೆದೊಯ್ದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ರಾಜ್ಯದ ಎಲ್ಲ ರೈತರು ದೆಹಲಿಗೆ ಹೋಗಲು ಸಾಧ್ಯವಿಲ್ಲ. ನಮ್ಮ ಪರವಾಗಿ ಕೆಲಸ ಮಾಡಬೇಕಾದ ಎಂಪಿಗಳು ನಿದ್ರೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಮೇಲೆ ಗೂಂಡಾಗಿರಿ ಮಾಡುತ್ತಿದೆ. ಸರ್ಕಾರಕ್ಕೆ ರೈತರು ಬಿಸಿ ಮುಟ್ಟಿಸಲು ಈ ರೀತಿಯ ಚಳವಳಿ ನಡೆಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡದಿದ್ದರೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಮರಣ ಶಾಸನವನ್ನು ರೈತರು ಬರೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರಕ್ಕೆ ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಲು ಹೆಚ್ಚಿನ ಕಾಳಜಿ ಇದೆ. ಆದರೆ, ರೈತರ ಸಾಲ ಮನ್ನಾ ವಿಚಾರ, ಸ್ವಾಮಿನಾಥನ್ ವರದಿಯನ್ವಯ ಬೆಂಬಲ ಬೆಲೆ, ಡಬ್ಲ್ಯೂಟಿಒ ಒಪ್ಪಂದ, ರೈತರಿಗೆ ಪಿಂಚಣಿ ನೀಡುವ ಯೋಜನೆ, ಬೆಳೆ ವಿಮೆ ಪದ್ಧತಿ, ಕಳೆದು ವರ್ಷ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತ ಕುಟುಂಬಕ್ಕೆ ಸರ್ಕಾರದ ನೆರವು ನೀಡುವ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.

ಇನ್ನು ರೈತರು ನ್ಯಾಯ ಕೇಳಿದರೆ ಗೋಲಿಬಾರ್ ಮಾಡುತ್ತಾರೆ, ಇದು ದೇಶದ ರೈತನಿಗೆ ಮಾಡುವ ಅಪಮಾನ. ರೈತರು ಗುಲಾಮರು ಅಲ್ಲ ಭಿಕ್ಷುಕರು ಅಲ್ಲ, ನಿಮಗೆ ಅಧಿಕಾರ ಶಾಶ್ವತಾನ? ಕೂಡಲೇ ಸಮಸ್ಯೆ ಬಗೆಹರಿಸಿ ಅನ್ನದಾತನ ಋಣ ತೀರಿಸಿ ಎಂದು ಚಳವಳಿ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ಹೋರಾಟದ ರೈತರು ಯಾರು ದೇಶದ್ರೋಹಿಗಳಲ್ಲ, ನಾವು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ದೆಹಲಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಭೂಪಾಲ್‌ನಲ್ಲಿ ತಡೆದು ಪೊಲೀಸರ ಮೂಲಕ ಬಂಧಿಸಿ ಮೂರು ದಿನದ ನಂತರ ವಾಪಸ್ ಕಳಿಸಿದ್ದೀರಿ. ದೆಹಲಿಯಲ್ಲಿ ಹೋರಾಟ ಮಾಡುವ ಪಂಜಾಬ್ ಹರಿಯಾಣ ರೈತರನ್ನು ದೇಶ ವಿರೋಧಿಗಳು ಎನ್ನುತೀರಿ. ಇದರ ಅರ್ಥ ಏನು ಎಂದು ಪ್ರಶ್ನಿಸಿದರು.

ಇನ್ನು ರೈತರು ಸಮಸ್ಯೆ ಬಗೆಹರಿಯುವ ತನಕ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ್, ರಾಜಸ್ಥಾನ ರೈತರ ಹೋರಾಟಕ್ಕೆ ನಾವು ಸದಾ ಜತೆಯಾಗಿರುತ್ತೇವೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಚಳವಳಿಯಲ್ಲಿ ಜಿಲ್ಲೆಯ ನೂರಾರು ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ