ಮೈಸೂರು: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಶಾಸಕ ವಾಸು (77) ನಿಧನರಾಗಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಜಯಲಕ್ಷ್ಮೀಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಇವರು ಟಿಕೆಟ್ ವಂಚಿತರಾಗಿದ್ದರು. ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾಗಿದ್ದರು.
ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮಾಲೀಕರಾಗಿರುವ ಇವರು ‘ಪ್ರಜಾನುಡಿ’ ಪತ್ರಿಕೆ ಮಾಲೀಕರಾಗಿದ್ದರು. ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.