NEWSರಾಜಕೀಯಸಂಸ್ಕೃತಿ

ಮೈಸೂರು ದಸರಾ: ಈ ಬಾರಿ ಅರಮನೆ ಆವರಣದಲ್ಲಷ್ಟೇ ಜಂಬೂ ಸವಾರಿ

ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ l 10 ಕೋಟಿ ರೂ. ಅನುದಾನಕ್ಕೆ ಒಪ್ಪಿದ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆ ಬಳಿಕ ಮಾತನಾಡಿ, ಕೋವಿಡ್‌ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಹೇಳಿದರು.

ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಠ 5 ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಗಿದೆ.

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್‌ಗಾಗಿ ಶ್ರಮಿಸಿರುವ ಕೊರೊನಾ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸರಿಂದ ನೆರವೇರಿಸಲು ನಿರ್ಧರಿಸಲಾಗಿದೆ.

ಇನ್ನು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು. ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಪ್ರಧಾನಮಂತ್ರಿಗಳ ಸ್ವಾವಲಂಬಿ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶಿ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಸೂಚಿಸಿರುವುದಾಗಿ ಹೇಳಿದರು.

ಸಚಿವ ಸಿ.ಟಿ. ರವಿ ಮಾತನಾಡಿ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲು ನಿರ್ಧರಿಸಲಾಗಿದೆ. ದಸರಾದಲ್ಲಿ ಜಂಬೂ ಸವಾರಿ ಇರಲ್ಲ, ಕೇವಲ ಅರಮನೆ ಆವರಣದಲ್ಲಿ ಮಾತ್ರ ಜಂಬೂ ಸವಾರಿ ಇರಲಿದೆ ಎಂದರು.

ಇನ್ನು ಈ ಬಾರಿ ಮಕ್ಕಳ ದಸರಾ, ಮಹಿಳಾ ದಸರಾ , ಯುವದಸರಾ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ , ಪಂಜಿನ ಕವಾಯತು ಕೂಡು ಇರುವುದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ,  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಷ್‌ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ,  ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಬಿ.ಶರತ್‌  ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ