NEWSಕೃಷಿನಮ್ಮರಾಜ್ಯ

ಮೈಸೂರು: ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಕಾಡಾ ಕಚೇರಿಮುಂದೆ ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ ನಡೆಸಿದರು.

ಇಂದು ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ನೇತೃತ್ವದಲ್ಲಿ ನಗರದ ಕಾಡಾ ಕಚೇರಿ ಮುಂದೆ ಜಮಾಯಿಸಿದ ರೈತರು ಕಾವೇರಿ, ಕಬಿನಿ ಅಚ್ಚುಕಟ್ಟು ಭಾಗದ ಕೆರೆಗಳು ಒಣಗಿದ್ದು ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೆಳೆಗಳು ಒಣಗಿ ಹಾಳಾಗುತ್ತಿವೆ ತಕ್ಷಣವೇ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸಿ ಎಂದು ಆಗ್ರಹಿಸಿದರು.

ಇದೇ ವೇಳೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದ ನೂರಾರು ರೈತರು ಪ್ರತಿಭಟನೆ ನಡೆಸಿ ದಕ್ಷಿಣ ವಲಯ ನೀರಾವರಿ ಇಲಾಖೆಯ ಉಪ ಮುಖ್ಯ ಅಭಿಯಂತರ ಗೌತಮ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಮೂರು ದಿನದ ಒಳಗೆ ನೀರು ಹರಿಸುವ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ ಮಾಡಿದ್ದು, ಬರ ಪರಿಹಾರ ಎಕರೆಗೆ ಕನಿಷ್ಠ 25 ಸಾವಿರ ರೂ. ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 10 ಸಾವಿರ ರೂ.ಗಳನ್ನು ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ತಮಿಳುನಾಡಿನ ಮುಖ್ಯಮಂತ್ರಿಗಳ ಬಾಂಧವ್ಯಕ್ಕೆ ತಲೆಬಾಗಿ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿ ಖಾಲಿ ಮಾಡಿದ ಕಾರಣ ಬೆಂಗಳೂರು ನಗರದ ನಿವಾಸಿಗಳು ಕಾವೇರಿ ಅಚ್ಚುಕಟ್ಟು ಭಾಗದ ರೈತರು ನೀರಿನ ಸಮಸ್ಯೆಗೆ ಬಲಿಯಾಗಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಈ ಅಚ್ಚುಕಟ್ಟು ಭಾಗದ ಕೆರೆಕಟ್ಟೆಗಳು ಒಣಗಿ ಹೋಗಿವೆ. ಜನ ಜಾನುವಾರುಗಳ ಕುಡಿಯುವ ನೀರಿಗೆ ಹಾಹಾರ ಎದ್ದಿದೆ. ಹೀಗಾಗಿ ಕೂಡಲೇ ನಾಲೆಗಳಲ್ಲಿ ನೀರು ಹರಿಸಿ ರೈತರ ರಕ್ಷಿಸಬೇಕು. ಕಾವೇರಿ ಅಚ್ಚು ಕಟ್ಟು ಭಾಗದ ರೈತರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಸಿಟ್ಟನ್ನು ಹೊರಹಾಕಿದರು.

ಇದೆಲ್ಲದ ನಡುವೆ ಕೇಂದ್ರ – ರಾಜ್ಯ ಸರ್ಕಾರಗಳು ರೈತರನ್ನು ಹಗುರವಾಗಿ ಕಾಣುತ್ತಿವೆ. ದೆಹಲಿಯಲ್ಲಿ ಚಳವಳಿ ಮಾಡುವ ರೈತರ ಶಕ್ತಿ ಹೆಚ್ಚಿಸಲು ನಾವೆಲ್ಲ ನಿರಂತರ ಹೋರಾಟ ಮಾಡಬೇಕಾಗಿದೆ ಎಂದು ರೈತರಿಗೆ ಕರೆ ನೀಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಮುಖಂಡರಾದ ಸಿದ್ದೇಶ್, ವೆಂಕಟೇಶ್ , ರಾಜೇಶ್, ದೇವನೂರು ವಿಜಯೇಂದ್ರ, ಕೆಂಡಗಣಸ್ವಾಮಿ, ಪ್ರದೀಪ್, ಸೂರಿ, ಉಮೇಶ್, ಕಾಟೂರು ನಾಗೇಶ್, ಅಂಬಳೆ ಮಂಜುನಾಥ್, ಸುನಿಲ್, ಸಾತಗಳ್ಳಿ ಬಸವರಾಜ್, ವಾಜಮಂಗಲ ಮಾದೇವ, ಶಿವಸ್ವಾಮಿ, ಚೇತನ್, ಶಂಭು, ವಾಜಮಂಗಲ ಮಾಲಿಂಗ ನಾಯಕ್, ಶಾಂತರಾಜ್, ಶಿವಮೂರ್ತಿ, ಮಂಜುನಾಥ್, ಶಿವಕುಮಾರ್ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌ "ARM" ಸಿನಿಮಾ ಇಂದು ಪ್ರಪಂಚದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆ ಸೆ.14ರಂದು ಸಾರಿಗೆ ಸಿಬ್ಬಂದಿಗಳಿಗೆ ಔಷಧೀಯ ಸಸ್ಯಗಳ  ಉಚಿತ ವಿತರಣೆ: ಅಧಿಕಾರಿಗಳು ಭಾಗಿ ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್! ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ-... ವಾಲ್ಮೀಕಿ ಹಗರಣ: ಬಳ್ಳಾರಿಯಿಂದ ಬಿಜೆಪಿ ಪಾದಯಾತ್ರೆ - ಛಲವಾದಿ ನಾರಾಯಣಸ್ವಾಮಿ