Vijayapatha - ವಿಜಯಪಥ > Blog > NEWS > Crime > ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತ
ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಗರದ ಯರಗನಹಳ್ಳಿಯಲ್ಲಿ ಜರುಗಿದೆ.
ಬಟ್ಟೆಗಳ ಐರನ್ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತಪಟ್ಟವರು. ಮೇಲ್ನೋಟಕ್ಕೆ ಸಿಲಿಂಡರ್ ಸೋರಿಕೆಯಿಂದ ಈ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಟೆಂಪೋ ಪಲ್ಟಿಯಾಗಿ ಕ್ಲೀನರ್ ಸಾವು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರ ಬಳಿ ಟೆಂಪೋ ಪಲ್ಟಿಯಾಗಿ ಓರ್ವ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕ್ಲೀನರ್ ಬಾಬುಜಾನ್ (32) ಮೃತರು. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related
Deva
Leave a reply