ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ
ಮೈಸೂರು-ಮಂಡ್ಯ: ಜಿಲ್ಲೆಯಲ್ಲಿ ಇಂದು ಅಂದರೆ 02.12 2024 ರಂದು ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ಈ ಹಿನ್ನೆಲೆಯಲ್ಲಿ 02.12.2024 ರಂದು ಸೋಮವಾರ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ದಿನದ ಕರ್ತವ್ಯವನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಿ ಪಾಠ ಬೋಧನೆ ಮಾಡುವ ಷರತ್ತಿಗೆ ಒಳಪಟ್ಟು ರಜೆ ಘೋಷಿಸಲಾಗಿದೆ.
ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಮ್ಮ ವ್ಯಾಪ್ತಿಯ ಶಾಲಾ ಮುಖ್ಯಸ್ಥರಿಗೆ ತಿಳಿಸಬೇಕು ಎಂದು ಮೈಸೂರು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮಂಡ್ಯದ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ.
ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.
ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದ್ದಾರೆ.