Please assign a menu to the primary menu location under menu

NEWSನಮ್ಮಜಿಲ್ಲೆಶಿಕ್ಷಣ-

ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ

ವಿಜಯಪಥ ಸಮಗ್ರ ಸುದ್ದಿ

ಮೈಸೂರು-ಮಂಡ್ಯ: ಜಿಲ್ಲೆಯಲ್ಲಿ ಇಂದು ಅಂದರೆ 02.12 2024 ರಂದು ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲು ಜಿಲ್ಲಾಧಿಕಾರಿಗಳು ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ 02.12.2024 ರಂದು ಸೋಮವಾರ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ದಿನದ ಕರ್ತವ್ಯವನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಿ ಪಾಠ ಬೋಧನೆ ಮಾಡುವ ಷರತ್ತಿಗೆ ಒಳಪಟ್ಟು ರಜೆ ಘೋಷಿಸಲಾಗಿದೆ.

ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಮ್ಮ ವ್ಯಾಪ್ತಿಯ ಶಾಲಾ ಮುಖ್ಯಸ್ಥರಿಗೆ ತಿಳಿಸಬೇಕು ಎಂದು ಮೈಸೂರು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಮಂಡ್ಯದ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ:  ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ  ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ.

ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.

ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...