NEWSಸಂಸ್ಕೃತಿಸಿನಿಪಥ

ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾಸಿದ ಮೈಸೂರು ರಂಗಾಯಣ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರತಿವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‌ನ್ನು ನಡೆಸುವ ಈ ಸಂಸ್ಥೆಯು ಪ್ರಸ್ತುತ 2023-24ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಬೇಕಿರುವ ಅರ್ಹತೆಗಳು: 2023-24ನೇ ಸಾಲಿನ ಈ ರಂಗತರಬೇತಿ ಕೋರ್ಸ್‌ ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು.

ಸಂಸ್ಥೆಯಿಂದ ನೀಡುವ ಸೌಲಭ್ಯ: ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.5,000, ವಿದ್ಯಾರ್ಥಿ ವೇತನ ಪಾವತಿಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಮೇ 15, 2023 ರಿಂದ ರಂಗಾಯಣದ ವೆಬ್‌ಸೈಟ್  https://rangayanamysore.karnataka.gov.in/ ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಕೆಲಸದ ದಿನಗಳ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು.

ಇನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230 ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180 (ರಂಗಕೈಪಿಡಿ ಶುಲ್ಕ: ರೂ.30 ಒಳಗೊಂಡಂತೆ) ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು (Deputy Director, Rangayana, Mysore) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ 2023 ಜೂನ್ 05ರ ಸಂಜೆ 5.30ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.

ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು, ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು, ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಾಹಾರದ ವ್ಯವಸ್ಥೆಯನ್ನು ಮಾತ್ರ ರಂಗಾಯಣದಿಂದ ಮಾಡಲಾಗುವುದು, ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2512639 ಹಾಗೂ ಮೊಬೈಲ್ ಸಂಖ್ಯೆ: 9448938661 / 9148827720 8867514311 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?