NEWSನಮ್ಮಜಿಲ್ಲೆಸಂಸ್ಕೃತಿ

ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬ: ಶಾಸಕ ಮಂಜು ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್.ಪೇಟೆ: ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬವಾಗಿವೆ, ಸತ್ಯಕ್ಕೆ ಎಂದಿಗೂ ಸಾವಿಲ್ಲ, ನ್ಯಾಯಕ್ಕೆ ಜಯ ಎಂಬ ಸಂದೇಶವನ್ನು ಸಾರುತ್ತಿವೆ ಎಂದು ಶಾಸಕ ಮಂಜು ಹೇಳಿದರು.

ಕೆ.ಆರ್.ಪೇಟೆ ಪಟ್ಟಣದ ಪುರಸಭಾ ಮೈದಾನದಲ್ಲಿ ಕರ್ನಾಟಕ ರತ್ನ ಡಾ. ರಾಜಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ಮಂಡ್ಯ ಜಿಲ್ಲಾ ಶಾಖೆಯ ಉದ್ಘಾಟನೆ ಅಂಗವಾಗಿ ಆಯೋಜಿಸಿದ್ದ ಶಿವಭಕ್ತ ಚಂಡಾಸುರ ಅಥವಾ ಹೇಮಾವತಿ ಪರಿಣಯ ಎಂಬ ಪೌರಾಣಿಕ ನಾಟಕ ಪ್ರದರ್ಶನದ ವೇಳೆ ಮಾತನಾಡಿದರು.

ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬವಾಗಿವೆ. ನಮ್ಮ ಸುತ್ತ ಮುತ್ತಲಿನಲ್ಲಿ ವಾಸಿಸುವ ಜನರ ಜೀವನದ ಮೌಲ್ಯಗಳನ್ನು ಪಾತ್ರಧಾರಿಗಳ ಮೂಲಕ ಕಾಣುತ್ತಿರುವ ನಾವು ಸತ್ಯಕ್ಕೆ ಎಂದಿಗೂ ಸಾವಿಲ್ಲ, ಅನ್ಯಾಯ ಅಕ್ರಮಗಳು ಹೆಚ್ಚು ದಿನಗಳು ಉಳಿಯುವುದಿಲ್ಲ ಎಂಬ ಅಂಶಗಳನ್ನು ಕಾಣುತ್ತಿದ್ದೇವೆ ಎಂದರು.

ನಾವು ಸಾಧನೆ ಮಾಡಲು ಕಷ್ಟವಾದರೂ ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಮಾರ್ಗದಲ್ಲಿಯೇ ಸಾಗುವ ಮೂಲಕ ಗುರಿ ಮುಟ್ಟಬೇಕು ಎಂದು ಕರೆ ನೀಡಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಮುಖಂಡರಾದ ಸೀಳನೆರೆ ಮೋಹನ್, ಸಿದ್ದೇಶ್, ಬಸ್ತಿ ರಂಗಪ್ಪ, ಕಡ್ಲೆಕಾಯಿ ಕೃಷ್ಣ, ಆದಿಹಳ್ಳಿ ಮೀನಾಕ್ಷಿ ರಮೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಶೋಕ್, ಡಾ. ರಾಜಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ರಾಜ್ಯಧ್ಯಕ್ಷ ಪರಶುರಾಮ್ ಗೊರಪ್ಪರವರ್.

ರಾಜ್ಯ ಉಪಾಧ್ಯಕ್ಷ ಸಿ.ಆರ್. ಪುಟ್ಟರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಯಲ್ಲೇಶ್, ಜಿಲ್ಲಾ ಗೌರವಾಧ್ಯಕ್ಷ ಸಿ.ಬಿ.ಸುನಿಲ್ ಕುಮಾರ್, ಜಿಲ್ಲಾ ಅಧ್ಯಕ್ಷ ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಸರಸ್ವತಿ ಸೇರಿದಂತೆ ನೂರಾರು ಜನರು ಇದ್ದರು.
l ವರದಿ ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ