ಬೆಂಗಳೂರು: ಗುರುವಾರ ಜೂನ್ 27ರ ಬೆಳಗ್ಗೆ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಸೇರಿದಂತೆ ಪಕ್ಷದ ಮುಖಂಡರುಗಳಾದ ಜಗದೀಶ್ ಸದಂ, ಡಾ. ಸತೀಶ್ ಕುಮಾರ್, ರವಿಕುಮಾರ್, ಗೋಪಾಲ್, ಅಂದಾನಪ್ಪ ನವಲಗುಂದ ಹಾಗೂ ಇನ್ನಿತರ ಮುಖಂಡರು ಭಾಗವಹಿಸಿದ್ದರು.