NEWSನಮ್ಮಜಿಲ್ಲೆಸಂಸ್ಕೃತಿ

ನಾಡಪ್ರಭು ಕೆಂಪೇಗೌಡರ ಅಭಿವೃದ್ಧಿ ಕಾರ್ಯಗಳೇ ನಮ್ಮೆಲ್ಲರಿಗೂ ಮಾರ್ಗದರ್ಶಕ: ಸಚಿವ ಮುನಿಯಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ನಾಡಪ್ರಭು ಕೆಂಪೇಗೌಡರು ಕೈಗೊಂಡ ದೂರದೃಷ್ಟಿತ್ವದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಬೆಂಗಳೂರು ಬೃಹತ್ ನಗರವಾಗಿ ಬೆಳೆದು ಜಗತ್ತಿನಲ್ಲಿಯೇ ಪ್ರಖ್ಯಾತಿ ಪಡೆದಿದೆ. ಅವರ ಆಡಳಿತ ಕಾರ್ಯವೈಖರಿ ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

“ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ 514ನೇ ಜಯಂತಿ” ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಬೆಂಗಳೂರು ಇಂದು ವಿಶ್ವದಲ್ಲೇ ಹೆಸರು ಗಳಿಸಲು ಕೆಂಪೇಗೌಡರ ಕಾರ್ಯವೈಖರಿ ಎಲ್ಲರಿಗೂ ಮಾದರಿ. ದೇವನಹಳ್ಳಿಯಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಒಂದು ಸಂಸ್ಥೆ ನಿರ್ಮಿಸಿ ಕೆಂಪೇಗೌಡರ ಇತಿಹಾಸ, ಅಭಿವೃದ್ಧಿ ಕಾರ್ಯಗಳು, ಆದರ್ಶಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭವಾದಾಗಿನಿಂದ ಕೈಗಾರಿಕೆಗಳು ಹೆಚ್ಚಾಗಿ ಬೆಳೆಯುತ್ತಿದೆ, ಕೃಷಿ ಭೂಮಿ ಕಡಿಮೆ ಆಗುತ್ತಿದೆ. ಈ ನಿಟ್ಟಿನಲ್ಲಿ ರೈತರ ಮಕ್ಕಳಿಗೆ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಉದ್ಯೋಗ ಮೇಳ ನಡೆಸಲಾಗುವುದು ಎಂದರು.

ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ ಮಾತನಾಡಿ, ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಟ್ಟು ಕೊಂಡು ಕೆರೆಗಳು, ದೇವಸ್ಥಾನಗಳು, ಪೇಟೆಗಳನ್ನು ನಿರ್ಮಿಸಿದ್ದರು. ಇಂದು 1.3 ಕೋಟಿಯಷ್ಟು ಜನ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಉದ್ಯೋಗ ಸೃಷ್ಟಿ, ತಂತ್ರಜ್ಞಾನ ಅಭಿವೃದ್ಧಿ, ಇನ್ನಿತರ ಕ್ಷೇತ್ರಗಳಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ. ಬೆಂಗಳೂರನ್ನು ವಿಶ್ವವಿಖ್ಯಾತಿಯನ್ನಾಗಿ ಮಾಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ದೇವನಹಳ್ಳಿಯ ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯದಿಂದ ಡಾ. ಬಿ.ಆರ್.ಅಂಬೇಡ್ಕರ್ ಭವನದವರೆಗೆ ಹಮ್ಮಿಕೊಳ್ಳಲಾದ ಕೆಂಪೇಗೌಡ ಅವರ ಭಾವಚಿತ್ರ ಹೊತ್ತ ರಥ ಸಂಚಾರಕ್ಕೆ ಹಾಗೂ ಕಲಾತಂಡಗಳ ಮೆರವಣಿಗೆ ನಡೆಯಿತು.

ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ಎಂ.ಶ್ರೀನಿವಾಸ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ವಸಂತಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು