CrimeNEWSಸಂಸ್ಕೃತಿ

ನಾಗಮಂಗಲ ಕೋಮುಗಲಭೆ ಪ್ರಕರಣ: ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ  ಆರೋಪದ ಮೇರೆಗೆ ಪೊಲೀಸ್‌ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ನಾಗಮಂಗಲ ‌ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅಮಾನತಾದ ಅಧಿಕಾರಿ. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ  ಆದೇಶ ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೃಷ್ಟಿಯಾದ ಗಲಭೆ ರಾತ್ರಿ ವಿಕೋಪಕ್ಕೆ ಹೋಗಿತ್ತು. ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, 52 ಮಂದಿಯನ್ನು ಆರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ಇನ್ನು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿ ಪೆಟ್ರೋಲ್‌ ಬಾಂಬ್‌ ಎಸೆದು ದಾಂಧಲೆ ನಡೆಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಬುಧವಾರ ಸಂಜೆ ಅದ್ದೂರಿ ಗಣಪತಿ ವಿಸರ್ಜನಾ ಮೆರವಣಿಗೆ ಮಾಡಲಾಗುತ್ತಿತ್ತು.  ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬರುತ್ತಿದ್ದಂತೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದು- ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿತ್ತು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಟ್ಟರು.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...