
ನಂಜನಗೂಡು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ವೇಸಗಿ ಆಕೆ ಗರ್ಭಧರಿಸಲು ಕಾರಣನಾದ ಕಾಮುಕ ಚಿಕ್ಕಪ್ಪ ಎಸಗಿರುವ ಪೈಶಾಚಿಕ ಕೃತ್ಯ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.
ಶಾಲೆಯಿಂದ ವಿದ್ಯಾರ್ಥಿನಿಯನ್ನು ಮನೆಗೆ ಕರೆತಂದು ಸ್ವಂತ ಚಿಕ್ಕಪ್ಪನೇ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ್ದಾನೆ. ಬಾಲಕಿಯ ಚಿಕ್ಕಪ್ಪ ನಂಜುಂಡಸ್ವಾಮಿ ಕೃತ್ಯ ಎಸಗಿದ ಆರೋಪಿ. 10 ನೇ ತರಗತಿ ಓದುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರು ಬಂಧಿಸಿ ಕಂಬಿ ಎಣಿಸಲು ಬಿಟ್ಟಿದ್ದಾರೆ.
ಕಳೆದ ಮೂರು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಮನೆಯವರು ಬಾಲಕಿಯನ್ನು ವೈದ್ಯರ ಬಳಿ ಪರಿಶೀಲನೆಗೆ ಕರೆದುಕೊಂಡು ಹೋದಾಗ ಚಿಕ್ಕಪ್ಪ ಮಾಡಿದ ಕೃತ್ಯ ಬೆಳಕಿಗೆ ಬಂದಿದೆ.
ಅತ್ಯಾಚಾರವೆಸಗಿದ ನಂಜುಂಡಸ್ವಾಮಿ 10 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನ ಜನವರಿಯಲ್ಲಿ ಪುಸಲಾಯಿಸಿ ಮನೆಗೆ ಕರೆತಂದಿದ್ದಾನೆ. ನಂತರ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ಬೆದರಿಸಿ ಮತ್ತೆ ಶಾಲೆಗೆ ಬಿಟ್ಟಿದ್ದಾನೆ.
ಇತ್ತ ದಿನ ಕಳೆದಂತೆ ಪೀರಿಯೆಡ್ಸ್ ನಲ್ಲಿ ವೆತ್ಯಾಸ ಕಂಡು ಬಂದಿದ್ದರಿಂದ ಭಯಗೊಂಡ ಕುಟುಂಬದವರು ಆಕೆಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ. ಆಗ ಬಾಲಕಿ 3 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
ಇನ್ನು ಈ ವಿಷಯ ತಿಳಿದ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ನಂಜುಂಡಸ್ವಾಮಿ ವಿರುದ್ಧ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಸದ್ಯ ಈಗ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ನೊಂದ ಬಾಲಕಿಯನ್ನು ಮೈಸೂರಿನ ಬಾಲಮಂದಿರದಿಂದ ಪರೀಕ್ಷಾ ಕೇಂದ್ರಕ್ಕೆ ಪೊಲೀಸರ ಭದ್ರತೆಯೊಂದಿಗೆ ಕರೆತರಲಾಗುತ್ತಿದೆ.
ಪ್ರಕರಣ ಸಂಬಂಧ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ನಂಜುಂಡಸ್ವಾಮಿಯನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಿ ಬಳಿಕ ಜೈಲಿಗೆ ಕಳುಹಿಸಿದ್ದಾರೆ.